37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆ: ಅಡಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ

ಬೆಳ್ತಂಗಡಿ : ವಿಶ್ವ ಆರೋಗ್ಯ ಸಂಸ್ಥೆಯ ಸಭೆಗೆ ತೆರಳುವ ಭಾರತದ ಪ್ರತಿನಿಧಿಗಳಿಗೆ ಅಡಕೆಯ ಔಷಧೀಯ ಮೌಲ್ಯಗಳ ಮಾಹಿತಿ ನೀಡುವ ಜತೆಗೆ, ಅಡಕೆಯ ಅಧ್ಯಯನ ಹಾಗೂ ಕೃಷಿಕರ ಬದುಕಿನ ಮಾಹಿತಿ ನೀಡಲು ವ್ಯವಸ್ಥೆಯಾಗಬೇಕು ಎಂದು ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ (ಎಆರ್‌ಡಿಎಫ್)ದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಪ್ರತಿಷ್ಠಾನದ ಅಧ್ಯಕ್ಷ ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ಅ.28 ಮಂಗಳವಾರ ಧರ್ಮಸ್ಥಳದಲ್ಲಿ ಸಭೆ ನಡೆಯಿತು. ಅಡಕೆ ಹಾನಿಕಾರಕ ಅಲ್ಲ ಎಂಬ ಅಂಶ ಈಗಾಗಲೇ ಅಧ್ಯಯನದಿಂದ ಹೊರಬಂದಿದ್ದು, ಎಆರ್ ಡಿಎಫ್ ಹಾಗೂ ಜೆಡ್ಡು ಆಯುರ್ವೇದ ಸಂಸ್ಥೆ ಈ ಬಗ್ಗೆ ಮಾಡಿರುವ ಅಧ್ಯಯನ ಅಂತರಾಷ್ಟ್ರೀಯ ಜರ್ನಲ್‌ನಲ್ಲೂ ಪ್ರಕಟವಾಗಿದೆ ಎಂಬ ಅಂಶವನ್ನು ಸಭೆಯ ಗಮನಕ್ಕೆ ತರಲಾಯಿತು.

ವಿದೇಶಿ ಅಡಕೆ ಆಮದು ತಡೆಗೆ, ಅಡಕೆ ಗುಣಮಟ್ಟದ ಮಾಹಿತಿ ಅಗತ್ಯ. ಈಗಾಗಲೇ ಎಆಡಿಎಫ್ ೬೩ಕ್ಕೂ ಹೆಚ್ಚು ವಿದೇಶಿ ಅಡಕೆಯ ಸ್ಯಾಂಪಲ್ ಪರಿಶೀಲಿಸಿದೆ. ಈ ಬಗ್ಗೆ ಸುಸಜ್ಜಿತ ಪ್ರಯೋಗಾಲಯ ಸ್ಥಾಪನೆ ಅಗತ್ಯ. ಅಡಕೆಯ ಇತರ ಬಳಕೆಯಾದ ಶಾಯಿ, ಬಣ್ಣದ ಬಗ್ಗೆ ಇನ್ನಷ್ಟು ಅಧ್ಯಯನ, ಸಂಸ್ಥೆಗಳ ಮೂಲಕ ತಯಾರಿಗೆ ಸಲಹೆ ನೀಡಲಾಯಿತು. ಅಡಕೆ ಹಳದಿರೋಗ ಪೀಡಿತ ಪ್ರದೇಶದ ರೈತರಿಗೆ ನೆರವಾಗಲು ಸರ್ಕಾರದಿಂದ ಕ್ರಮವಾಗಬೇಕು. ಈ ಬಗ್ಗೆ ಒತ್ತಾಯ ಅಗತ್ಯವಿದೆ. ಆ ಪ್ರದೇಶದಲ್ಲಿ ಪರ್ಯಾಯ ಬೆಳೆಗೆ ಪ್ರೋತ್ಸಾಹ ನೀಡಲು ಯೋಜನೆಗೆ ಸಲಹೆ ನೀಡಲಾಯಿತು. ವಿಶೇಷವಾಗಿ ಸುಳ್ಯ, ಶೃಂಗೇರಿ ಹಾಗೂ ಕೊಪ್ಪ ತಾಲೂಕಿಗೆ ಆದ್ಯತೆ ನೀಡಬೇಕಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಅಡಕೆ ಕೊಳೆರೋಗದಿಂದ ಕೃಷಿಕರು ಸಂಕಷ್ಟ ಅನುಭವಿಸಿರುವ ಬಗ್ಗೆ ಚರ್ಚೆ ನಡೆಯಿತು. ಶೇ.70ನಷ್ಟವಾಗಿರುವ ಬಗ್ಗೆ ಅಂದಾಜಿಸಲಾಗಿದ್ದು, ಸರ್ಕಾರದ ಗಮನಕ್ಕೆ ತಂದು ಪರಿಹಾರ ಕ್ರಮಗಳ ಬಗ್ಗೆಯೂ ಒತ್ತಾಯಿಸಲಾಯಿತು. ಅಡಕೆಯ ವಿವಿಧ ಔಷಧೀಯ ಗುಣದ ಬಗ್ಗೆ ಅಧ್ಯಯನ ನಡೆಸಲು ನಿರ್ಧರಿಸಲಾಯಿತು.

ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಟ್ರಸ್ಟಿಗಳಾದ ಕ್ಯಾಂಪ್ರೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಲಿ, ಅಡಕೆ ಮಹಾಮಂಡಲ ಅಧ್ಯಕ್ಷ ಆರಗ ಜ್ಞಾನೇಂದ್ರ, ಕ್ಯಾಂಪ್ಕೋ ನಿರ್ದೇಶಕ ಬಿ.ವಿ.ಸತ್ಯನಾರಾಯಣ, ಟಿಎಸ್‌ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ತುಮ್ಮೋಸ್ ಅಧ್ಯಕ್ಷ ಎಚ್.ಎಸ್.ಶಿವಕುಮಾರ್, ಅಡಕೆ ಕೃಷಿ ಸಂಶೋಧಕ ಬದನಾಜೆ ಶಂಕರ ಭಟ್, ಅಖಿಲ ಭಾರತ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ, ಪ್ರತಿಷ್ಠಾನದ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್ ಕೇಶವ ಭಟ್ ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!