25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಅ.30ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ಕೃಷ್ಣಪ್ಪ ಗೌಡ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಮಾಜಿ ಅಧ್ಯಕ್ಷ ಗಣೇಶ್ ಗೌಡ ಮಾತನಾಡಿ ಶಾಲೆಯ ಸರ್ವಾಂಗೀಣ ಬೆಳವಣಿಗೆ ಮತ್ತು ನಮ್ಮ ವರ್ತನೆ ಸಮಾಜದಲ್ಲಿ ಹೇಗಿರಬೇಕೆಂದು ತಿಳಿಸಿದರು.

ಮಗುವಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರದ ಬಗ್ಗೆ ಎಸ್.ಡಿ.ಎಮ್ ಸಿ ಶಿಕ್ಷಣ ತಜ್ಞರಾದ ಟಿ.ಪಿ ಆಂಟನಿ ಯವರು ತಿಳಿಸಿದರು. ನೊಡೆಲ್ ಅಧಿಕಾರಿಯಾದ ಶ್ರೀಮತಿ ವಿನೋದ ಶಿಕ್ಷಕರು, ವಿದ್ಯಾರ್ಥಿಗಳ ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಮತ್ತು ಮಗುವಿನ ಶೈಕ್ಷಣೀಕ ಪ್ರಗತಿಯ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ವೇದಾವತಿ, ಎಸ್.ಡಿ.ಎಮ್.ಸಿ ಸದಸ್ಯರು, ಮುಖ್ಯ ಶಿಕ್ಷಕರು , ಅಧ್ಯಾಪಕ ವೃಂದ ಹಾಗೂ ಪೋಷಕರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ ಮುಖ್ಯ ಶಿಕ್ಷಕಿ ರೋಹಿಣಿ ಕೆ ಸ್ವಾಗತಿಸಿ, ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು.

ಕಳೆದ ವರ್ಷ 7ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವನ್ನು ವಿತರಿಸಲಾಯಿತು.

ಶಿಕ್ಷಕಿ ಶೀಲಾವತಿ ಕಾರ್ಯಕ್ರಮ ನಿರ್ವಹಿಸಿ , ಶೃತಿ ಧನ್ಯವಾದವಿತ್ತರು.

Related posts

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya
error: Content is protected !!