September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ: “ಭಾರತ ವಿಶ್ವಗುರುವಾಗುವ ಹಾದಿಯಲ್ಲಿ ಕರ್ನಾಟಕದ ಮಕ್ಕಳಾದ ನಮ್ಮ ಕೊಡುಗೆ ನಿರಂತರವಾಗಿರಲಿ. ಈ ದಿನಕ್ಕಾಗಿ ಹೋರಾಡಿದ ಮಹಾನ್ ನಾಯಕರನ್ನು ಎಂದೆಂದಿಗೂ ನಾವು ನೆನೆಯಲೇ ಬೇಕು” ಎಂದು ಹಳೆಪೇಟೆ, ಉಜಿರೆ, ನಿಡ್ಲೆ ವಲಯ ಬೆಳ್ತಂಗಡಿಯ ಸಿ.ಆರ್.ಪಿ ಶ್ರೀಮತಿ ಪ್ರತಿಮಾ ಕೆ.ಎಂ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಕಾರ್ಯಕ್ರಮ ಉದ್ಘಾಟಿಸಿ, ಮಾಸಿಕ ಕಾರ್ಯಚಟುವಟಿಕೆಗಳ ಅನಾವರಣಗೊಳಿಸಿ ವಿದ್ಯಾರ್ಥಿಗಳಿಗೆ ಕರ್ನಾಟಕದ ಇತಿಹಾಸ ಹಾಗೂ ಕನ್ನಡ ಭಾಷೆಯ ಹಿನ್ನೆಲೆಯ ಮಹತ್ವದ ಕುರಿತು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಲಾ ವಿದ್ಯಾರ್ಥಿಗಳಿಂದ ಗುಂಪುಗಾಯನ ಹಾಡಲಾಯಿತು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿ ಅನರ್ಘ್ಯ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿನಿ ಧೃತಿ ವಂದಿಸಿದರು.

Related posts

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

Suddi Udaya

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ: ವೇಣೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

Suddi Udaya

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya
error: Content is protected !!