32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.

ಕನ್ನಡ ಭುವನೇಶ್ವರಿ ದೇವಿಯ ಮುಂದೆ ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆ ಮಾಡಿ ಮಾತನಾಡಿದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರು ಕನ್ನಡಿಗರಾದ ನಾವು, ಜಾತಿ – ಮತ – ಪಂಥಗಳ ಭೇದ ಮರೆತು, ಕನ್ನಡ ಎನ್ನುವ ಹೆಸರಿನಲ್ಲಿ ಬಾಳುತ್ತಿದ್ದೇವೆ. ಕನ್ನಡ ನಮ್ಮ ಭಾವೈಕ್ಯತೆಯನ್ನು ಹೆಚ್ಚಿಸುವ ಭಾಷೆ ಎಂದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಅವರು, ಜಗತ್ತಿಗೆ ಕನ್ನಡಿಗರು ನೀಡಿದ ಕೊಡುಗೆ ಅಮೂಲ್ಯವಾದುದು. ಅದನ್ನು ಸ್ಮರಿಸಿ, ಮುಂದುವರೆಸುವ ಜವಾಬ್ದಾರಿ ನಮ್ಮ ತಲೆಮಾರಿನ ಮೇಲಿದೆ ಎಂದರು.

ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕಿ ನಿಶಾ ಪೂಜಾರಿ, ಭೌತ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಸತ್ಯ ನಾರಾಯಣ ಭಟ್, ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ, ಮುಖ್ಯಸ್ಥ ಪ್ರಸನ್ನ ಭೋಜ, ಉಪನ್ಯಾಸಕರಾದ ರಘು ಬಿಜೂರು ,ಅರುಣ್ ಕ್ಯಾಸ್ಟೋಲಿನ್, ಬಿ ಜಿ ಬಿರಾದಾರ್ , ಡಾ.ಆಸ್ಟಿನ್, ಉಷಾ ಬಿಕೆ , ದಿಶಾ, ಜ್ಯೋತಿ ಹೆಗ್ಡೆ, ಹೃತಿಕ್ ,ಚರಣ್, ಅರುಣ್ ಕುಮಾರ್, ಲೇಖನ, ಚೈತ್ರ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ತಿಪ್ಪೇ ಸ್ವಾಮಿ ಪ್ರಾರ್ಥಿಸಿದರು. ಮೊಹಮ್ಮದ್ ಮುನೀರ್ ನಿರೂಪಿಸಿದರು. ಕನ್ನಡ ವಿಭಾಗ ಮುಖ್ಯಸ್ಥ ಜಯರಾಮ್ ವಂದಿಸಿದರು.

Related posts

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

Suddi Udaya

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya
error: Content is protected !!