23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

ತಣ್ಣೀರುಪಂತ ಸುಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಮತ್ತು ಕನಸು ಸಂಜೀವಿನಿ ಮಹಿಳಾ ಒಕ್ಕೂಟ ಬಾರ್ಯ ಇದರ ಸಮಗ್ರ ಕೃಷಿ ಚಟುವಟಿಕೆಯ ಕುರಿತು ಮಾಹಿತಿ ಕಾರ್ಯಗಾರವನ್ನು ತಣ್ಣೀರುಪಂಥ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸವಿತಾ ಇವರ ಸಮ್ಮುಖದಲ್ಲಿ ನಡೆಸಲಾಯಿತು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ ಹಾಗೂ ಜಿಲ್ಲಾ ಕೃಷಿ ವ್ಯವಸ್ಥಾಪಕ ವಿನಿತ್ ಸಮಗ್ರ ಕೃಷಿ ನಿರ್ವಹಣೆಯ ಕುರಿತು ಸದಸ್ಯರಲ್ಲಿ ಐಎಫ್ ಸಿ ಮೂಲಕ ಅನುಷ್ಠಾನ ಗೊಳಿಸಬಹುದಾದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು ಮತ್ತು ಚರ್ಚಿಸಿದರು.

ಈ ಸಂದರ್ಭದಲ್ಲಿ ತಾಲೂಕು ವ್ಯವಸ್ಥಾಪಕ ಬಂಗಾರಪ್ಪ ಮತ್ತು ಕೃಷಿಯೇತರ ಮ್ಯಾನೇಜರ್ ನಿತಿಶ್ ಕುಮಾರ್, ವಲಯ ಮೇಲ್ವಿಚಾರಕರಾದ ಜಯಾನಂದ ಹಾಗೂ ಸ್ವಸ್ತಿಕ್ ಉಪಸ್ಥಿತರಿದ್ದರು. ಹಾಗೆಯೇ ತಣ್ಣೀರುಪಂತ ಗ್ರಾಮ ಪಂಚಾಯತಿನ ಅಧ್ಯಕ್ಷೆ ಶ್ರೀಮತಿ ಹೇಮಾವತಿ , ಅಭಿವೃದ್ಧಿ ಅಧಿಕಾರಿ ಸುಮಯ್ಯ ಜಿ. ಹೆಚ್. , ಕಾರ್ಯದರ್ಶಿ ಆನಂದ , ಸಿಬ್ಬಂದಿಗಳು ಹಾಗೂ ಸುಗಮ ಸಂಜೀವಿನಿ ಮತ್ತು ಕನಸು ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ, ಪದಾಧಿಕಾರಿಗಳು, ಒಕ್ಕೂಟದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸ್ವಸ್ತಿಕ್ ಜೈನ್ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಸೌಮ್ಯಶ್ರೀ ಸ್ವಾಗತಿಸಿದರು. ಕೃಷಿ ಸಖಿ ಶ್ರೀಮತಿ ಶೋಭಾ ಧನ್ಯವಾದವಿತ್ತರು.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಗೌಡ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಒಕ್ಕಲಿಗ , ಉಪಜಾತಿಯ ಕಾಲಂ ನಲ್ಲಿ ಗೌಡ ಎಂದು ನಮೂದಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಹೇಳಿಕೆ

Suddi Udaya

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

Suddi Udaya

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!