ನಡ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಜರುಗಿತು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ಗೌಡ, ಸದಸ್ಯರಾದ ಶ್ರೀಮತಿ ಜಯಂತಿ, ಶ್ರೀಮತಿ ಭಾರತಿ , ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕ ವೃಂದದವರು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು. ಈ ವೇಳೆ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು











