22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಅರಸಿನಮಕ್ಕಿ ಎಂಬಲ್ಲಿನ ನಿವಾಸಿ ಪಿ.ಟಿ ಜೋಸೆಫ್ ಎಂಬವರನ್ನು ಅ.31ರಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಒಕ್ಕೆಲಬ್ಬಿಸಿದ್ದು ಅವರ ಕೃಷಿಯನ್ನು ಸಂಪೂರ್ಣ ವಾಗಿ ನಾಶ ಪಡಿಸಿ ಇಲ್ಲಿ ಅರಣ್ಯ ಗಿಡಗಳನ್ನು ನೆಟ್ಟಿದ್ದಾರೆ.

ಕಳೆದ ಐದು ದಶಕದಿಂದಲೂ ಇಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ನೀಡಲಾಗಿದ್ದ ಹಕ್ಕು ಪತ್ರವನ್ನು ರದ್ದುಪಡಿಸಿದ ಅರಣ್ಯ ಇಲಾಖೆ ಇದೀಗ ಯಾವುದೇ ಪರಿಹಾರವನ್ನೂ ನೀಡಿದೆ ಏಕಾಏಕಿ ಒಕ್ಕಲೆಬ್ಬಿಸಿ ಅವರ ಮನೆ ಹಾಗೂ ಕೃಷಿ ಭೂಮಿಯಿಂದ ಹೊರಗೆ ಕಳುಹಿಸಿದ್ದು ಬೇರೆ ಜಮೀನಾಗಲಿ ಮನೆಯಾಗಲಿ ಇಲ್ಲದ ಈ ಕುಟುಂಬ ಬೀದಿಪಾಲಾದಂತಾಗಿದೆ.

ಇವರು ಕಳೆದ 50ವರ್ಷಗಳಿಂದ ಇವರು ಬದುಕಿದ್ದ ಮನೆಯನ್ನು ನಾಶಪಡಿಸಲಾಗಿದ್ದು ಸುಮಾರು ಎರಡು ಎಕ್ರೆ ಜಾಗದಲ್ಲಿದ್ದ ಫಲಕೊಡುವ ಅಡಿಕೆ ಮರಗಳನ್ನು ತೆಂಗಿನ ಮರಗಳನ್ನು ಹಾಗೂ ಇತರ ಕೃಷಿಯನ್ನು ಪೂರ್ಣ ಕಡಿದುರುಳಿಸಲಾಗಿದ್ದು ಅರಣ್ಯ ಇಲಾಖೆಯ ಬೋರ್ಡ್ ಅಳವಡಿಸಲಾಗಿದೆ.

1970 ರ ಸುಮಾರಿಗೆ ಪಿಟಿ ಜೋಸೆಫ್ ಅವರ ತಂದೆ ಇಲ್ಲಿ ಬಂದು ನೆಲೆಸಿದ್ದು 1997ರಲ್ಲಿ ಇವರಿಗೆ ರಾಜ್ಯ ಸರಕಾರ‌ ಅಕ್ರಮ ಸಕ್ರಮ ಕಾನೂನಿನ ಅಡಿಯಲ್ಲಿ 4.90 ಎಕ್ರೆ ಜಮೀನಿಗೆ ಹಕ್ಕು ಪತ್ರವನ್ನೂ ನೀಡಿತ್ತು. ಯಾವಾಗ ಕುದುರೇ ಮುಖ ರಾಷ್ಟ್ರೀಯ ಉದ್ಯಾನವನ ಘೋಷಣೆಯಾದ ಬಳಿಕ ಇವರಿಗೆ ಸಮಸ್ಯೆಗಳು ಆರಂಭವಾಯಿತು. 2004ರಲ್ಲಿ ಇವರ ಹಕ್ಕು ಪತ್ರವನ್ನು ರದ್ದು ಪಡಿಸಲಾಯಿತು. 2014ರಲ್ಲಿ ಅರಣ್ಯ ಇಲಾಖೆ ಜೋಸೆಫ್ ಅವರಿಗೆ ಮತ್ತೆ ನೋಟೀಸ್ ನೀಡಿ ಒಕ್ಕಲೇಳುವಂತೆ ಸೂಚಿಸಿತ್ತು. ಇದರ ವಿರುದ್ದ ಅವರು ಅರಣ್ಯ ಇಲಾಖೆಯಲ್ಲಿ ಸಲ್ಲಿಸಿದ್ದ ಮೇಲ್ಮನವಿಗಳು ತಿರಸ್ಕಾರಗೊಂಡಿತ್ತು. ಇವರಿಗೆ ಒಕ್ಕಲೇಳು ವಂತೆ ಅ16 ರಂದು ಅಂತಿಮ ನೋಟೀಸ್ ನೀಡಿ ಅ30 ರೊಳಗೆ ಸ್ಥಳ ಬಿಟ್ಟು ತೆರಳುವಂತೆ ಸೂಚಿಸಿತ್ತು. ಇದೀಗ ಅ 31ರಂದು ಪೊಲೀಸ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದಿಗೆ ಆಗಮಿಸಿದ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಶರ್ಮಿಷ್ಠ ನೇತೃತ್ವದ ತಂಡ ಕೃಷಿಯನ್ನು ಹಾಗೂ ಮನೆಯನ್ನು ಸಂಪೂರ್ಣವಾಗಿ ನಾಶಪಡಿಸಿ ಒಕ್ಕಲೆಬ್ಬಿಸುವಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ಕಾಜೂರು ದರ್ಗಾಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya
error: Content is protected !!