32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವ

ಬೆಳ್ತಂಗಡಿ : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಪಕ್ಷದ ಕಚೇರಿ ಮುಂಭಾಗದಲ್ಲಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ನಡೆಯಿತು.

ಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ ಎಸ್‌ಡಿಪಿಐ ಸಂಕಲ್ಪ, ಒಲವಿನ ಕರ್ನಾಟಕ ಎಂಬ ಘೋಷವಾಕ್ಯದೊಂದಿಗೆ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಧ್ವಜಾರೋಹಣ ನಡೆಸಿದರು.
ಮುಖ್ಯ ಅತಿಥಿಯಾಗಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿಗಳಾದ ನವಾಝ್ ಕಟ್ಟೆ ಅತಿಥಿ ಭಾಷಣ ಮಾಡಿದರು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಜೊತೆ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ, ಸಮಿತಿ ಸದಸ್ಯರಾದ ಅಶ್ರಫ್ ಕಟ್ಟೆ, ಮುಸ್ತಫಾ ಜಿ.ಕೆರೆ, ಉಜಿರೆ ಬ್ಲಾಕ್ ಅಧ್ಯಕ್ಷರಾದ ಸಲೀಂ ಲಾಯಿಲ, ಕಾರ್ಯದರ್ಶಿ ಮರ್ಷಾ ಉಜಿರೆ, ಸಾದಿಕ್ ಲಾಯಿಲ, ಬೆಳ್ತಂಗಡಿ ನಗರ ಸಮಿತಿ ಉಪಾಧ್ಯಕ್ಷರಾದ ಇಸ್ಮಾಯಿಲ್ ಬೆಳ್ತಂಗಡಿ ಹಾಗೂ ಪಕ್ಷದ ಬ್ರಾಂಚ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರೌಫ್ ಪುಂಜಾಲಕಟ್ಟೆ ಸ್ವಾಗತಿಸಿ, ಧನ್ಯವಾದಗೈದರು.

Related posts

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಬಾರ್ಯ: ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಹಾಗೂ ಶ್ರೀ ಬಲರಾಮರ ಜಯಂತಿ ಆಚರಣೆ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!