September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

ಬೆಳ್ತಂಗಡಿ: 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ ನಡೆಯಿತು.

ಗಮಕ ವಾಚನವನ್ನು ತಮ್ಮ ಸುಶ್ರಾವ್ಯ ಕಂಠದ ಮೂಲಕ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ನಡೆಸಿಕೊಟ್ಟರು. ಗಮಕ ವ್ಯಾಖ್ಯಾನಕಾರರಾಗಿ ಪ್ರೊ| ಮಧೂರು ಮೋಹನ ಕಲ್ಲೂರಾಯ ಭಾಗವಹಿಸಿ ಪ್ರೇಕ್ಷಕರ ಮನ ಗೆದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಕುಮಾರ್ ಜೈನ್ ವಹಿಸಿದರು. ಮೋಹನ ಕಲ್ಲೂರಾಯರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಪ್ರಥಮ ಪಿಯುಸಿ ಪಠ್ಯ ಭಾಗದ ವಿಷಯವೇ ಗಮಕದಲ್ಲಿ ಆಯ್ಕೆ ಮಾಡಿಕೊಂಡ ಕಾರಣ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

ಉಪನ್ಯಾಸಕ ಆನಂದ ಸ್ವಾಗತಿಸಿ, ಉಪನ್ಯಾಸಕ ಶೀನಾ ನಾಡೋಳಿ ವಂದಿಸಿದರು. ಉಪನ್ಯಾಸಕಿ ಡಾ.ಅಮೃತ ರಶ್ಮಿ ಫೆರ್ನಾಂಡಿಸ್ ಕಾರ್ಯಕ್ರಮ ಉಪನ್ಯಾಸಕ ಡಾ. ಗಣೇಶ್ ಭಟ್ ಅವರು ಪ್ರಾಸ್ತಾವಿಕ ಮಾತನಾಡಿದರು.
ವೇದಿಕೆಯಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಪೂರ್ಣಿಮಾ ಉಪಸ್ಥಿತರಿದ್ದರು. ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ಉಪನ್ಯಾಸಕರು, ಅಧ್ಯಾಪಕರು, ವಿದ್ಯಾರ್ಥಿಗಳು , ಬಿಇಡಿ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.

Related posts

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya

ಯುವವಾಹಿನಿ ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಇಲಂತಿಲ ಆಯ್ಕೆ

Suddi Udaya

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!