23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಪ್ರೊ| ಲಿಯೋ ನೋರೊನ್ಹ ರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ನಮ್ಮಲ್ಲಿರುವ ದುಡ್ಡು, ಸಂಪತ್ತು ಯಾರೂ ಬೇಕಾದರೂ ಲೂಟಿ ಮಾಡಬಹುದು ಆದರೆ ನಾವು ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರೂ ನಮ್ಮೊಳಗಿನ ದೇಶಾಭಿಮಾನ, ಭಾಷಾಭಿಮಾನವನ್ನು ಯಾರಿಂದಲೂ ಲೂಟಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿ , ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ವಿದ್ಯಾರ್ಥಿನಿಯಾದ ಯಶ್ಮಿ ರವರು ಕನ್ನಡ ರಾಜ್ಯೋತ್ಸವದ ಮಹತ್ವದ ಬಗ್ಗೆ ವಿವರಣೆಯನ್ನು ನೀಡಿದರು.

ವಿದ್ಯಾರ್ಥಿಗಳು ಗೀತ ಗಾಯನ ಮತ್ತು ನೃತ್ಯದ ಮೂಲಕ ಕನ್ನಡಾಂಬೆಗೆ ನುಡಿ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸ ರವರು, ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಆರಾಧ್ಯ ನಿರೂಪಿಸಿ, ಸಹಶಿಕ್ಷಕಿಯಾದ ಭಾಗ್ಯಶ್ರೀ ಸ್ವಾಗತಿಸಿ, ವಿದ್ಯಾರ್ಥಿಯಾದ ಪ್ರಥಮ್ ಧನ್ಯವಾದವನ್ನು ಸಮರ್ಪಿಸಿದರು.

Related posts

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ನಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.90.58 ಫಲಿತಾಂಶ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya
error: Content is protected !!