25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾರಿನಲ್ಲಿ ಅಕ್ರಮ ದನ ಸಾಗಾಟ : ಧರ್ಮಸ್ಥಳ ಪೊಲೀಸರಿಂದ ಆರೋಪಿಗಳ ಬಂಧನ

ಬೆಳ್ತಂಗಡಿ : ಪಟ್ರಮೆ ಗ್ರಾಮದ ಪಟ್ಟೂರಿನಲ್ಲಿ ಅಕ್ರಮವಾಗಿ ಕಾರಿನಲ್ಲಿ ಮೂರು ದನಗಳನ್ನು ಸಾಗಾಟ ಮಾಡುತ್ತಿದ್ದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಗಳನ್ನು ಬಂಧಿಸಿದ ಘಟನೆ ನ.2 ರಂದು ನಡೆದಿದೆ.

ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ KA-19-MC-5862 ಸ್ವೀಪ್ಟ್ ಕಾರಿನಲ್ಲಿ ನ.2 ರಂದು 7:30 ಕ್ಕೆ ತಡೆದು ನಿಲ್ಲಿಸಿ ಪರಿಶೀಲನೆ ಮಾಡಿದಾಗ ಅಕ್ರಮವಾಗಿ ಮೂರು ದನಗಳನ್ನು ಸಾಗಾಟ ಮಾಡುತ್ತಿದ್ದನ್ನು ಪತ್ತೆ ಹಚ್ಚಿದ್ದಾರೆ.

ಸ್ವೀಪ್ಟ್ ಕಾರಿನಲ್ಲಿದ್ದ ಉಳ್ಳಾಲ ತಾಲೂಕಿನ ಸಜಿಪ ಪಡು ಗ್ರಾಮದ ಕೋಟೆಕನಿ ನಿವಾಸಿ ಹಮೋದ್ ಕೆ ಮಗ ಮಹಮ್ಮದ್ ಸಿನಾನ್ (25) ಮತ್ತು ಉಳ್ಳಾಲ ತಾಲೂಕಿನ ಸಜಿಪನಾಡು ಗ್ರಾಮದ ತಂಚಿಬೆಟ್ಟು ನಿವಾಸಿ ಮಹಮ್ಮದ್ ಮಗ ಇಬ್ರಾಹಿಂ ಖಲೀಲ್ @ ತೌಸೀಫ್(38) ಬಂಧಿಸಿದ್ದಾರೆ.

ಆರೋಪಿಗಳಿಬ್ಬರು ಮೂರು ದನಗಳನ್ನು ಜೋಹಾರ ಪಟ್ಟೂರು ಗ್ರಾಮದಿಂದ ಖರೀದಿಸಿ ಮಾಂಸ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ಮೂರು ಜಾನುವಾರುಗಳ ಮೌಲ್ಯ 20 ಸಾವಿರ ಮತ್ತು ಕಾರಿನ ಮೌಲ್ಯ 2 ಲಕ್ಷ ರೂಪಾಯಿಯಾಗಿದೆ. ಕಾರು ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 5,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ 11(1) (D) ಪ್ರಾಣಿ ಹಿಂಸೆ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಯಿಸಲಾಗಿದೆ.

Related posts

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜು ನೂತನ ಪ್ರಾಂಶುಪಾಲರಾಗಿ ಸಂತೋಷ್ ಸಲ್ಡಾನ ಅಧಿಕಾರ ಸ್ವೀಕಾರ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya
error: Content is protected !!