September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.1 ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ, ಕನ್ನಡಕ್ಕಾಗಿ ಹೋರಾಡಿದ ವ್ಯಕ್ತಿಗಳನ್ನು ಸ್ಮರಿಸುವುದರ ಜೊತೆಗೆ ಸುಂದರ – ಸುಲಲಿತವಾದ ಕನ್ನಡ ಭಾಷೆಯನ್ನು ಮಾತನಾಡುತ್ತಾ ನಾವು ಕನ್ನಡಿಗರು ಎಂಬ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳಾದ ಶ್ರೇಯಸ್ ದಿನದ ಮಹತ್ವದ ಕುರಿತು ಮಾತನಾಡಿದರು. ತ್ರಿಶಾ ಜೈನ್ ಮತ್ತು ಮೋಕ್ಷಿತ್ ಸ್ವರಚಿತ ಕವನವನ್ನು ವಾಚಿಸಿದರು. ವಿದ್ಯಾರ್ಥಿಗಳಿಂದ ನಾಡಗೀತೆಗಳ ಗಾಯನ ನೆರವೇರಿತು.

ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಪದಬಂಧ ತುಂಬಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಪುಸ್ತಕ ಮತ್ತು ಪುರಸ್ಕೃತರ ಪ್ರಮುಖ ಪುಸ್ತಕವನ್ನು ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಶಾಲೆಗೆ ಟಿವಿಯನ್ನು ಕೊಡುಗೆಯಾಗಿ ನೀಡಲಾಯಿತು. ಇದನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಶಿಧರ್ ಮತ್ತು ಉಪಾಧ್ಯಕ್ಷರಾದ ಪದ್ಮನಾಭ ಇವರು ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.

ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಕುರ್ಕಿಲ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕನ್ನಡ ಶಿಕ್ಷಕ ಸುಮನ್ ಯು ಎಸ್ ಸಂಯೋಜಿಸಿದರು. ವಿದ್ಯಾರ್ಥಿಗಳಾದ ಮೋಹನ್ ಕೃಷ್ಣ ಸ್ವಾಗತಿಸಿ, ಕಾರ್ತಿಕ್ ವಂದಿಸಿದರು‌. ಆಯಿಷತ್ ಸಂಶಿಯಾ ನಿರೂಪಿಸಿದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಭೇಟಿ: ಅಂರ್ತಜಲ ವೃದ್ಧಿ ನಮ್ಮೆಲ್ಲರ ಜವಾಬ್ದಾರಿ

Suddi Udaya
error: Content is protected !!