September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳ್ತಂಗಡಿ: ವಿದ್ಯಾರ್ಥಿಗಳು ಸನ್ಮಾರ್ಗ, ಶ್ರಮ, ಪ್ರಾಮಾಣಿಕತೆ ಮತ್ತು ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ ಕುಶಾಲಪ್ಪ ಗೌಡ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ, ಆಧುನಿಕ ತಂತ್ರಜ್ಞಾನವು ಉತ್ತಮ ರೀತಿಯಲ್ಲಿ ಬಳಕೆಯಾಗದೆ ದುರುಪಯೋಗವಾಗುತ್ತಿರುವುದು ವಿಪರ್ಯಾಸವಾಗಿದೆ. ಇದರಿಂದ ವಿದ್ಯಾರ್ಥಿಗಳು ಸೃಜನಶೀಲರಾಗಲು ತಡೆಯುಂಟಾಗಿದೆ. ವಿದ್ಯಾರ್ಥಿ ಜೀವನದ ಯಶಸ್ಸಿಗೆ ವಿದ್ಯಾರ್ಥಿ, ಪೋಷಕರು, ಮತ್ತು ಶಿಕ್ಷಣ ಸಂಸ್ಥೆ ಸಮಾನ ಸಹಭಾಗಿತ್ವವನ್ನು ವಹಿಸಬೇಕಾಗಿದೆ ಎಂದರು.


ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅವರು ಉತ್ತಮ ಫಲಿತಾಂಶವನ್ನು ಪಡೆಯುವಲ್ಲಿ ಪೋಷಕರ ಜವಾಬ್ದಾರಿಗಳನ್ನು ಕುರಿತು ಮಾಹಿತಿಯನ್ನು ನೀಡಿದರು.
ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿರಿದ್ದರು.
‌‌ ಶಿಕ್ಷಕ ರಕ್ಷಕ ಸಂಘದ ಸದಸ್ಯರಾದ ಮಹಾಬಲ ಗೌಡ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು. ಉಪನ್ಯಾಸಕಿ ಶಾಲಿಕಾ ಪಿ ಆರ್ ಧನ್ಯವಾದವಿತ್ತರು.

Related posts

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya
error: Content is protected !!