ನಾವೂರು: ಇತ್ತೀಚೆಗೆ ಅಪಘಾತದಲ್ಲಿ ಮೃತರಾದ ನಾವೂರು ಗ್ರಾಮದ ಚಂದ್ರಹಾಸ ಅವರ ಮನೆಗೆ ನ. 2 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿ, ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಬಂಗಾಡಿ ಸಿ ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಮೊರ್ತಾಜೆ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ್ ಗೌಡ ನಾವೂರು, ನಾವೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ನಾಗಾಜೆ, ಮತ್ತಿತರ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.











