ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ) ಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅತಿಥಿ ಬಿ. ಸೋಮಶೇಖರ್ ಶೆಟ್ಟಿ, ನಿವೃತ್ತ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯವರು ಕನ್ನಡಾಂಬೆ ಗೆ ಪುಷ್ಪಾಂಜಲಿ ಮಾಡಿ ಕನ್ನಡ ನಾಡು ನುಡಿ ಸಂಸ್ಕೃತಿಯ ವಿಚಾರಗಳನ್ನು ಒಳಗೊಂಡ ಚಿತ್ರಹಾಳೆ ಬಿಡುಗಡೆಗೊಳಿಸಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕನ್ನಡ ನಾಡಿನ ಸಂಸ್ಕೃತಿ, ಇತಿಹಾಸ ಭವ್ಯವಾದುದು, ಕನ್ನಡ ನುಡಿ,ಸಂಸ್ಕೃತಿ ಯನ್ನು ಉಳಿಸಿ,ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ,ಕನ್ನಡ ನಾಡಿನ ಏಕೀಕೃತಕ್ಕೆ ಹೋರಾಡಿದ ಮಹನೀಯರನ್ನು ನಾವು ಸ್ಮರಿಸಿ, ಕೃತಜ್ಞತೆ ಸಲ್ಲಿಸುವ ಕರ್ತವ್ಯ ನಮ್ಮದು, ನಮ್ಮ ದೇಶಕ್ಕೆ ಕನ್ನಡ ನಾಡಿನ ಕೊಡುಗೆ ಗಮನಾರ್ಹವಾದುದು, ಈ ಉತ್ಸವ ಒಂದು ದಿನಕ್ಕೆ ಸೀಮಿತವಾಗಿರಬಾರದು.
ವಿದ್ಯಾರ್ಥಿಗಳಲ್ಲಿ ಒಂದು ಗುರಿ ಇರಬೇಕು, ಅದನ್ನು ತಲುಪಲು ನೇರಮಾರ್ಗದಲ್ಲಿ ಚಲಿಸಬೇಕು, ಜೀವನದಲ್ಲಿ ಉತ್ತಮ ಸಾಧನೆ ಮಾಡಿ ಜೀವನಕ್ಕೆ ಅರ್ಥ ಒದಗಿಸಬೇಕು, ನಮ್ಮ ಭವಿಷ್ಯ ನಮ್ಮ ಕೈಯಲ್ಲಿ ಇದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ವಹಿಸಿದ್ದರು.

ವಿದ್ಯಾರ್ಥಿ ಅದಿತಿ ಸ್ವಾಗತಿಸಿ, ಅದ್ವಿತಿ ರಾವ್ ಅತಿಥಿ ಪರಿಚಯಿಸಿದರು . ಪಲ್ಲವಿ ವಂದಿಸಿದರು. ಸಪ್ತಮಿ ನಿರೂಪಿಸಿದರು.

ವಿದ್ಯಾರ್ಥಿಗಳು ಗಾದೆಗಳ ವಾಚನ, ಒಗಟು , ಸಾಂಸ್ಕೃತಿಕ ನೃತ್ಯ, ರಾಜ್ಯೋತ್ಸವದ ದಿನಗಳ ವಿಶೇಷತೆ ಸಾರುವ ಹಾಡು ಹಾಗೂ ನೃತ್ಯಗಳ ಪ್ರದರ್ಶನ ಮಾಡಲಾಯಿತು. ನಿನಾದ 90.4 ರೆೇಡಿಯೋ ಚಾನೆಲ್ ನಲ್ಲಿ ಕನ್ನಡ ರಾಜ್ಯೋತ್ಸವದ ವಿಶೇಷ ಪ್ರಸಾರದಲ್ಲಿ ಶಾಲಾ ವಿದ್ಯಾರ್ಥಿಗಳ ರೇಡಿಯೋ ಕಾರ್ಯಕ್ರಮ ಪ್ರಸಾರವಾಗಿದ್ದು ಕನ್ನಡ ರಾಜ್ಯೋತ್ಸವ ಆಚರಣೆಗೆ ವಿಶೇಷ ಮೆರುಗು ತಂದಿತು.

ಶಿಕ್ಷಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ

Suddi Udaya

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ತಣ್ಣೀರುಪಂಥ: ಉಚಿತ ಆರಿ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭ

Suddi Udaya

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya
error: Content is protected !!