September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ, ಸಾಂಸ್ಕೃತಿಕ ಸಂಘ ಮತ್ತು ಕನ್ನಡ ವಿಭಾಗದ ವತಿಯಿಂದ ಭಾರತೀಯ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಹಾಗೂ ರೇಂಜರ್ಸ್ ಘಟಕ , ಭಾರತೀಯ ಯುವ ರೆಡ್ ಕ್ರಾಸ್ ಘಟಕ ಮತ್ತು ಕ್ರೀಡಾ ಸಂಘದ ಸಹಯೋಗದೊಂದಿಗೆ 70ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆ ಯಿಂದ ಆಚರಿಸಲಾಯಿತು.

ನಾಡಗೀತೆಯ ಸಮೂಹ ಗಾಯನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಮಾಧವರವರು ಕನ್ನಡ ನಾಡಿನ ಕಲೆ, ಸಾಹಿತ್ಯ, ಶ್ರೀಮಂತ ಪರಂಪರೆ ಬಗ್ಗೆ ಮಾತನಾಡಿ “ಅಳಿವಿನಂಚಿಗೆ ಸಾಗುತ್ತಿರುವ ಕನ್ನಡ ಭಾಷೆಯನ್ನು ಸಂರಕ್ಷಿಸುವುದು ಕನ್ನಡಿಗರಾದ ನಮ್ಮೆಲ್ಲರ ಕರ್ತವ್ಯ”ಎಂದು ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಾತಾಡು ಕನ್ನಡ – ಆಶುಭಾಷಣ ಸ್ಪರ್ಧೆ, ಕನ್ನಡ ನೃತ್ಯಾಂಜಲಿ – ಸಮೂಹ ನೃತ್ಯ ಸ್ಪರ್ಧೆ, ಹಾಗೂ ಕನ್ನಡ ಸಂಗೀತ ಸಿಂಚನ – ಸಮೂಹ ಗಾಯನ ಸ್ಪರ್ಧೆ ಮೊದಲಾದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅಧ್ಯಾಪಕ ವೃಂದದವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.

ವೇದಿಕೆಯಲ್ಲಿ ಪ್ರಾಂಶುಪಾಲರಾದ ಪ್ರೊ. ಮಾಧವ, ಐ. ಕ್ಯೂ. ಎ. ಸಿ. ಸಂಚಾಲಕರಾದ ಡಾ. ಅವಿತಮರಿಯ ಕ್ವಾಡ್ರಸ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ. ವೈಶಾಲಿ ಮತ್ತು ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ರೇಖಾ ಯು. ಎನ್. ರವರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ಕು| ಮಾನಸ ಮತ್ತು ಕು|ವರ್ಷಿಣಿಯವರು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಿರೂಪಿಸಿದರು.
ಕನ್ನಡ ವಿಭಾಗದ ಕು| ಸುನೈನ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕ ವೃಂದದವರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Suddi Udaya

ರಾಜ್ಯದ ಜನರ ತೀರ್ಮಾನ, ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya
error: Content is protected !!