ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ವಹಿಸಿ ಕನ್ನಡ ನಾಡು ನುಡಿ ಯ ಮಹತ್ವ ದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.

ಮುಖ್ಯ ಅತಿಥಿಯಾಗಿ ಸ್ಥಳೀಯ ಪ್ರಗತಿಪರ ಕೃಷಿಕ ರಾಮನಂದ ನಾಯಕ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ಮಾತನಾಡಿ ಕನ್ನಡ ನಾಡು ಬೆಳೆದು ಬಂದ ಹಾದಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಮೇಲಿನಡ್ಕದ ಮೋಹನ್ ಭಟ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿಯಾದ ಶ್ರೀಮತಿ ಪುಷ್ಪಲತಾ ಸ್ವಾಗತಿಸಿ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾದ ಶ್ರೀಮತಿ ಶೀಲಾ ಎನ್ ಧನ್ಯವಾದವಿತ್ತರು. ಶಾಲಾ ಶಿಕ್ಷಕಿಯಾದ ಕುಮಾರಿ ಜತಿಕ್ಷ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya

ಕೊಯ್ಯೂರು: ಮಲೆಬೆಟ್ಟು ಬದಿನಡೆ ಶ್ರೀ ವನದುರ್ಗ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಕುಕ್ಕೇಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

“ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತ ಶಾಸಕ ಹರೀಶ್ ಪೂಂಜಾರಿಗೆ ಪದ್ಮುಂಜದಲ್ಲಿ ಗೌರವಾಭಿನಂದನೆ – 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳಿಂದ ಸನ್ಮಾನ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya
error: Content is protected !!