September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಉಜಿರೆ ವತಿಯಿಂದ “ಕಾಯೌ ಶ್ರೀಗೌರಿ” ಶೀರ್ಷಿಕೆಯಡಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನ.3 ರಂದು ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಭವ್ಯವಾಗಿ ನಡೆಯಿತು.

ಮುಖ್ಯ ಅತಿಥಿಯಾಗಿ ಸಹಾಯಕ ಪ್ರಾಧ್ಯಾಪಕರು (ಕನ್ನಡ ವಿಭಾಗ) ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಶ್ರೀನಾಥ್ ಎಂ.ಪಿ. ರವರು ಪಾಲ್ಗೊಂಡು, ಕನ್ನಡದ ಮಹತ್ವ ಹಾಗೂ ಸಂಸ್ಕೃತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ಮತ್ತು ಯೋಗ ವಿಭಾಗದ ಡೀನ್ ಹಾಗೂ ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕುತ್ಲೂರು: ಕಾಡಬಾಗಿಲು ನಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

Suddi Udaya
error: Content is protected !!