ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆ ಹಾಗೂ ಶಿಕ್ಷಣದ ಖಾತರಿಗಾಗಿ ಮಕ್ಕಳ ಹಕ್ಕುಗಳ ಮಾಸೋತ್ಸವ ಕಾರ್ಯಕ್ರಮವು ಜಿಲ್ಲೆಯಾದ್ಯಂತ ಪ್ರತಿ ವರ್ಷವೂ ನಡೆಯುತ್ತಾ ಬಂದಿರುತ್ತದೆ ಬೆಳ್ತಂಗಡಿ ತಾಲೂಕಿನಲ್ಲಿ 2025 -26 ನೇ ಸಾಲಿನ ಈ ಮಾಸೋತ್ಸವ ಕಾರ್ಯಕ್ರಮವನ್ನು ನಡೆಸುವ ಬಗ್ಗೆ ನ. 3 ರಂದು ಗುರುವಾಯನಕೆರೆ ಶ್ರೀ ಗುರು ನಿವಾಸದಲ್ಲಿ ಸಮಾಲೋಚನ ಸಭೆಯನ್ನು ನಡೆಸಲಾಯಿತು.
ಈ ಸಮಾಲೋಚನ ಸಭೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಸಂಬಂಧಪಟ್ಟಂತೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮುದಾಯಕ್ಕೆ ಜನಪ್ರತಿನಿಧಿಗಳಿಗೆ ಇಲಾಖೆ ಅಧಿಕಾರಿಗಳಿಗೆ ವಿವಿಧ ಹಂತಗಳಲ್ಲಿ ಮಕ್ಕಳ ಹಕ್ಕುಗಳ ಕುರಿತಾಗಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಚರ್ಚಿಸಲಾಯಿತು.
2025- 26 ನೇ ಸಾಲಿನ ಬೆಳ್ತಂಗಡಿ ತಾಲೂಕಿನ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅನುಗ್ರಹ ಟ್ರೈನಿಂಗ್ ಕಾಲೇಜ್ ಬೆಳ್ತಂಗಡಿ ಇದರ ನಿರ್ದೇಶಕ ಅಬ್ದುಲ್ ಖಾದರ್ ನಾವೂರು ಇವರನ್ನು ಆಯ್ಕೆ ಮಾಡಲಾಯಿತು .ಅದೇ ರೀತಿ ಸಹ ಸಂಚಾಲಕರಾಗಿ ಸಾಹಿತಿ ಅತ್ರಾಡಿ ಅಮೃತ ಶೆಟ್ಟಿ ಸಾಮಾಜಿಕ ಕಾರ್ಯಕರ್ತರಾದ ಪ್ರಶಾಂತ ಮಚ್ಚಿನ ಬೆಳ್ತಂಗಡಿ ತಾಲೂಕು ಎಸ್ ಡಿ ಎಂ ಸಿ ಸಮನ್ವಯ ವೇದಿಕೆ ಕೋಶಾಧಿಕಾರಿ ಅಶ್ರಫ್ ನಿಟ್ಟಡೆ , ಸಾಮಾಜಿಕ ಕಾರ್ಯಕರ್ತರದ ಮೊಹಮ್ಮದ್ ನಜೀರ್, ಬೆಳ್ತಂಗಡಿ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯರಾದ ಸುಧಾಮಣಿ ಆರ್, ಜಲಜಾಕ್ಷಿ ಗುರುವಾಯನಕೆರೆ, ನವೀನ್ ಪೂಜಾರಿ ಮೇಲಂತ ಬೆಟ್ಟು, ಮಲ್ಲಿಕಾ ಆರ್ ಹಾಗೂ ಸಿ ಕೆ ಚಂದ್ರಕಲಾ. ಮತ್ತು ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ಗೌರವ ಅಧ್ಯಕ್ಷ ರಮಾನಂದ ಸಾಲಿಯನ್ ಇವರುಗಳನ್ನು ಆಯ್ಕೆ ಮಾಡಲಾಯಿತು .
ನವೆಂಬರ್ ತಿಂಗಳ ಹದಿನಾಲ್ಕರಂದು ಬೆಳ್ತಂಗಡಿ ತಾಲೂಕು ಮಟ್ಟದ ಮಕ್ಕಳ ಹಕ್ಕುಗಳ ಮಾಸೋತ್ಸವ ಕಾರ್ಯಕ್ರಮ ದ ಉದ್ಘಾಟನೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು.
ದಕ್ಷಿಣಕನ್ನಡ ಜಿಲ್ಲಾ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾದ ಮೊಹಮ್ಮದ್ ರಫೀಕ್ ದರ್ಬೆ ಉಪಸ್ಥಿತರಿದ್ದರು . ಪಡಿ ಸಂಸ್ಥೆಯ ಸಂಯೋಜಕರಾದ ಶ್ರೀಮತಿ ಕಸ್ತೂರಿ ಬೊಳುವಾರು ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.











