37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರಿಗೆ ಶಾಲಾ ಅಭಿವೃದ್ಧಿ ಸಮಿತಿಯವರ ಮನವಿಯ ಮೇರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಮನವಿಯನ್ನು ಸಲ್ಲಿಸಿದ್ದು ಈ ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿ ಶಾಲೆಯನ್ನು ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆರಿಸಿ ಆದೇಶವನ್ನು ಮಾಡಿದ್ದು. ಶಾಲಾ ಅಭಿವೃದ್ಧಿಯ ಮನವಿಗೆ ಸ್ಪಂದಿಸಿ ಕೆಪಿಎಸ್ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ರವರಿಗೆ ಸಮಿತಿಯವರು ಇಂದು ಕಚೇರಿಯಲ್ಲಿ ಅಭಿನಂದನೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹರೀಶ್ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ಮಚ್ಚಿನ, ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ\ ಸುಧೀರ್ ಕುಮಾರ್ ಶೆಟ್ಟಿ ಕೋರಬೆಟ್ಟು, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಘಟಕದ ಪ್ರಧಾನ ಕಾರ್ಯದರ್ಶಿ ನಾರಾಯಣ ಪೂಜಾರಿ ಮಚ್ಚಿನ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಹರೀಶ್ ಕುದ್ಕೊಳಿ, ಅಶ್ರಫ್ ಕಾರಂದೂರು, ಕಿರಣ್ ಭಟ್, ರೊನಾಲ್ಡ್ ಕುದ್ಕೊಳಿ, ಸುಧೀರ್ ಬರೆದಾಡಿ, ಸಂಪತ್ ಪೂಜಾರಿ ಕೈಲಾ, ಶ್ರೀಮತಿ ವಿದ್ಯಾ ಕುತ್ತಿನ, ಶ್ರೀಮತಿ ಸವಿತಾ, ಕೇಶವ ಪೂಜಾರಿ, ಉಪಸ್ಥಿತರಿದ್ದರು.

Related posts

ಮನೆಯಂಗಳದಲ್ಲಿ ನಿಂತಿದ್ದ ಕನ್ಯಾಡಿ ಅಂಡಿರ್‌ಮಾರ್ ನಿವಾಸಿ ಮಂಜಪ್ಪ ನಾಯ್ಕರ ಮೇಲೆ ಚಿರತೆ ದಾಳಿ: ಕಾಲಿಗೆ ಕಚ್ಚಿ ಗಂಭೀರ ಗಾಯ- ಬೆಳ್ತಂಗಡಿ ಆಸ್ಪತ್ರೆಗೆ ದಾಖಲು

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya
error: Content is protected !!