September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಲೆನ್ಸಿ ಪಿಂಟೊ, ಉಪಾಧ್ಯಕ್ಷರಾಗಿ ಫ್ರಾನ್ಸಿಸ್ ವಿ.ವಿ ಅವಿರೋಧ ಆಯ್ಕೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮುಂದಿನ 2025-30ರ ಅವಧಿಗೆ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆಯು ನ. 4 ರಂದು ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ ಚುನಾವಣಾ ಅಧಿಕಾರಿಯವರ ನೇತೃತ್ವದಲ್ಲಿ ನಡೆಯಿತು.

ಸೊಸೈಟಿಯು ಕಳೆದ 10 ವರ್ಷದಿಂದ ಯಶಸ್ವಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದು ಅಧ್ಯಕ್ಷರಾಗಿ ಸತತ ಎರಡು ಅವಧಿಯಲ್ಲಿ ನಿಸ್ವಾರ್ಥ ಸೇವೆಗೈದ ಲೆನ್ಸಿ ಪಿಂಟೊರವರು ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಫ್ರಾನ್ಸಿಸ್ ವಿ.ವಿ. , ನಿರ್ದೇಶಕರುಗಳಾಗಿ ವಿವೇಕ್ ವಿನ್ಸೆಂಟ್ ಪಾಯಸ್, ಜೋಯೆಲ್ ಗೋಡ್‌ಫ್ರಿ ಮೆಂಡೋನ್ಸಾ, ಸಿರಿಲ್ ಸಿಕ್ವೇರಾ, ರೊನಾಲ್ಡ್ ಸಿಕ್ವೇರಾ, ಗ್ರೆಗೋರಿ ಸೇರಾ, ಲಿಯೋ ರೊಡ್ರಿಗಸ್, ಶ್ರೀಮತಿ ಸೆಲೆಸ್ತಿನ್ ಡಿ ಸೋಜಾ, ಶ್ರೀಮತಿ ಗ್ರೇಸಿ ರೀಟಾ ರೆಬೆಲ್ಲೊ, ಶ್ರೀಮತಿ ಮೋಲಿ ಫೆರ್ನಾಂಡಿಸ್ ಆಯ್ಕೆಯಾಗಿದ್ದು ಮುಂದಿನ 5 ವರ್ಷಗಳಿಗೆ ಈ ಮಂಡಳಿಯು ಸೊಸೈಟಿಯ ಜವಾಬ್ದಾರಿಯನ್ನು ಹೊತ್ತುಕೊಂಡು ಕಾರ್ಯನಿರ್ವಹಿಸಲಿದೆ.

ಈ ಪ್ರಕ್ರಿಯೆಯನ್ನು ದ.ಕ.ಜಿಲ್ಲಾ ಸಹಕಾರಿ ಸಂಘಗಳ ಉಪ ನಿರ್ದೇಶಕರಾದ ಎಚ್.ಎನ್. ರಮೇಶ್‌ರವರ ನಿರ್ದೇಶನದಂತೆ ಚುನಾವಣಾ ಅಧಿಕಾರಿಯಾಗಿ ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾರವರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಸೊಸೈಟಿಯ ಮುಖ್ಯ ಸಲಹೆಗಾರರಾದ ಮೋನಪ್ಪ ಪೂಜಾರಿ ಕಡೆಂತ್ಯ್ಯಾರು ಉಪಸ್ಥಿತರಿದ್ದು ಶುಭ ಹಾರೈಸಿದರು. ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ವಲೇರಿಯನ್ ಡಿ ಸೋಜಾರವರು ವಂದಿಸಿದರು.

Related posts

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತ ಸಂಘದ ಪದ ಪ್ರದಾನ

Suddi Udaya

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮಚ್ಚಿನ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಬಡ ಕುಟುಂಬಕ್ಕೆ ಆರ್ಥಿಕ ಧನಸಹಾಯ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!