September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

ಧರ್ಮಸ್ಥಳ: ಅಕ್ರಮವಾಗಿ ಕಾರಿನಲ್ಲಿ ಗೋಮಾಂಸ ಮಾಡಲು ಮೂರು ದನಗಳನ್ನು ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಳು ಹಾಕಿ ಜಪ್ತಿ ಮಾಡಿದ್ದಾರೆ.

ಧರ್ಮಸ್ಥಳ ಪೊಲೀಸರು ‌ನ.2 ರಂದು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ಗೋ ಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು KA-19-MC-5862 ನಂಬರಿನ ರಿಟ್ಜ್ ಕಾರಿನಲ್ಲಿ ಸಾಗಾಟ ಮಾಡುವಾಗ ಉಳ್ಳಾಲ ತಾಲೂಕಿನ ಮಹಮ್ಮದ್ ಖಲೀಲ್@ ತೌಸೀಫ್ (38) ಮತ್ತು ಮಹಮ್ಮದ್ ಸಿನಾನ್(25) ಸಿಕ್ಕಿ ಬಿದ್ದಿದ್ದರು.ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದನ ನೀಡಿದ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಜೋಹಾರ ಸೇರಿ ಮೂವರ ವಿರುದ್ಧ ಕಲ5,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ 11,(1)(D) ಪ್ರಾಣಿ ಹಿಂಸೆ ಕಾಯಿದೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ಮೂರು ದನಗಳನ್ನು ಆರೋಪಿ A-2 ಉಳ್ಳಾಲ ತಾಲೂಕಿನ ಸಜಿಪನಾಡು ಗ್ರಾಮದ ತಂಚಿಬೆಟ್ಟು ನಿವಾಸಿ ಮಹಮ್ಮದ್ ಮಗ ಇಬ್ರಾಹಿಂ ಖಲೀಲ್ @ ತೌಸೀಫ್ ಮನೆಯಲ್ಲಿ ಗೋಮಾಂಸ ಮಾಡುವುದಾಗಿ ಬಾಯಿಬಿಟ್ಟಿದ್ದರು ಇದರಿಂದ ಧರ್ಮಸ್ಥಳ ಪೊಲೀಸರು ಉಳ್ಳಾದಲ್ಲಿರುವ ಇಬ್ರಾಹಿಂ ಖಲೀಲ್ @ ತೌಸೀಫ್ ಮನೆಯನ್ನು ನ.4 ರಂದು ಮುಟ್ಟುಗೋಳು ಹಾಕಿ ಜಪ್ತಿ ಮಾಡಿಕೊಂಡಿದ್ದಾರೆ.

Related posts

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya
error: Content is protected !!