September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

ಬೆಳ್ತಂಗಡಿ: ಉಪ್ಪಿನಂಗಡಿ ಹೋಟೆಲೊಂದರ ಕಾರ್ಮಿಕ ಮೊದಲ ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ಪಕ್ಕದಲ್ಲಿ ಹರಿಯುವ ತೋಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ನ.4ರಂದು ನಸುಕಿನ ವೇಳೆ ಸಂಭವಿಸಿದೆ.

ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಬನಾರಿ ಮನೆ ನಿವಾಸಿ ಗಣೇಶ್ ನಾಯ್ಕ (60) ಎಂಬವರೇ ಮೃತಪಟ್ಟ ದುರ್ದೈವಿಯಾಗಿದ್ದು, ಇವರು ಉಪ್ಪಿನಂಗಡಿಯ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಟೇಲೊಂದರಲ್ಲಿ ಕಾರ್ಮಿಕರಾಗಿದ್ದು, ನಸುಕಿನ ವೇಳೆ ಎದ್ದು ಕಾರಿಡಾರ್ ಬಳಿ ಬಂದಾಗ ಅಯತಪ್ಪಿ ಕೆಳಗಿನ ತೋಡಿಗೆ ಬಿದ್ದು ತಲೆಗೆ ಗಂಭೀರ ಸ್ವರೂಪದ ಗಾಯಗೊಂಡ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಘಟನೆಗೆ ಸಂಬಂಧಿಸಿ ಮೃತರ ಮಗ ಜಗದೀಶ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya

ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ

Suddi Udaya

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya
error: Content is protected !!