September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಎಟಿಎಂ ಉದ್ಘಾಟನೆ

ಬೆಳ್ತಂಗಡಿ: ಬ್ಯಾಂಕಿನಲ್ಲಿ ನಗದು ವಹಿವಾಟು ತಗ್ಗಿಸುವ ನಿಟ್ಟಿನಲ್ಲಿ ಎಟಿಎಂ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ. ಕೆನರಾ ಬ್ಯಾಂಕ್ ಗ್ರಾಹಕರ ಆರ್ಥಿಕ ಹೃದಯ ಮಾತ್ರವಲ್ಲ, ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಾಧ್ಯವಿರುವ ಎಲ್ಲಾ ರೀತಿಯ ಸಹಾಯ ಮಾಡುವ ಜವಾಬ್ದಾರಿಯನ್ನು ಹೊಂದಿದೆ ಎಂದು ಬೆಂಗಳೂರು ಕೆನರಾ ಬ್ಯಾಂಕಿನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಭವೇಂದ್ರ ಕುಮಾರ್ ಹೇಳಿದರು.

ಅವರು ನ.5 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ನಿರ್ಮಿಸಿದ ಕೆನರಾ ಬ್ಯಾಂಕಿನ ಸಿರಿ ಎಟಿಎಂ ಉದ್ಘಾಟಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ ಎಂ.ಡಿ ಮಾತನಾಡಿ ಅತ್ಯಾಧುನಿಕ ಬ್ಯಾಂಕಿಂಗ್ ಪರಿಹಾರಗಳನ್ನು ಒದಗಿಸುವುದು, ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳುವುದು, ವ್ಯವಹಾರವನ್ನು ಸುಲಭಗೊಳಿಸಲು ಸಹಾಯ ಮಾಡುವುದು ಮತ್ತು ಸಮಗ್ರ ಬೆಳವಣಿಗೆಯ ಮೂಲಕ ಕೆನರಾ ಬ್ಯಾಂಕ್ ದೇಶದ ಜನರಿಗೆ ಶಕ್ತಿ ತುಂಬುವ ಕೆಲಸ ಮಾಡಿದೆ.ನಮ್ಮ ಸಿರಿ ಸಂಸ್ಥೆಯಲ್ಲಿ ಸಿರಿ ಎಟಿಎಂ ಸ್ಥಾಪನೆಯಾಗಿದ್ದರಿಂದ ನಗದು ವ್ಯವಹಾರಕ್ಕೆ ಸುಲಭವಾಗಿದೆ ಎಂದರು.

ಈ ಸಂದರ್ಭದಲ್ಲಿ ಮಂಗಳೂರು ಸರ್ಕಲ್ ಆಪೀಸ್ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಮಂಜುನಾಥ್,ಬೆಂಗಳೂರು ಚೀಫ್ ಜನರಲ್ ಮ್ಯಾನೇಜರ್ ಶಂಭುಲಾಲ್, ಪುತ್ತೂರು ರಿಜೀನಲ್ ಆಫೀಸ್ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರಂಜನ್ ಕುಮಾರ್ ,ಬೆಳ್ತಂಗಡಿ ಕೆನರಾ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಪ್ರತಾಪ್, ಮಂಗಳೂರು ಸರ್ಕಲ್ ಆಫೀಸ್ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ನರೇಶ್ , ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕ ರಾಜೇಶ್ ಪೈ ಉಜಿರೆ, ಪುತ್ತೂರು ಡಿವಿಜಿನಲ್ ಮ್ಯಾನೇಜರ್ ಅಜಿತ್ ಕುಮಾರ್, ರುಡ್ ಸೆಟ್ ಎಕ್ಸಿಕ್ಯುಟಿವ್ ಡೈರೆಕ್ಟರ್ ವಿಜಯ್ ಕುಮಾರ್, ರುಡ್ ಸೆಟ್ ಡೈರೆಕ್ಟರ್ ಅಜೇಯ, ಪುತ್ತೂರು ರೀಜನಲ್ ಆಫೀಸ್ ಮಾರ್ಕೆಟಿಂಗ್ ಮ್ಯಾನೇಜರ್ ಹರೀಶ್ ನಾಯ್ಕ್, ಸಿರಿ ಸಂಸ್ಥೆಯ ಸಿಇಓ ಪ್ರಸನ್ನ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ಬಡಗಕಾರಂದೂರು : ಶಾಲಾ ಮಟ್ಟದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’ ಸಂಪನ್ನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಮದ್ದಡ್ಕ ತಾಯಿ ರಕ್ತೇಶ್ವರಿ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.1 ಲಕ್ಷ ದೇಣಿಗೆ

Suddi Udaya
error: Content is protected !!