ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ. ಬಂಟ್ವಾಳ, ಸರಕಾರಿ ಪ್ರೌಢಶಾಲೆ ನಾವೂರು, ಬಂಟ್ವಾಳ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ, ಬಾಲಕಿಯರ ಕ್ರೀಡಾಕೂಟವು ನ. 3 ಹಾಗೂ 4 ರಂದು ಬಂಟ್ವಾಳದ ಎಸ್.ವಿ.ಎಸ್ ದೇವಳ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು.
ಈ ಕ್ರೀಡಾಕೂಟದಲ್ಲಿ ಎಲ್ ಸಿ ಆರ್ ವಿದ್ಯಾ ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಒಟ್ಟು 4 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಬಾಲಕಿಯರ 14ರ ವಯೋಮಾನದ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಅಪರ್ಣ ಎ ಶೆಟ್ಟಿ 7 ನೇ ತರಗತಿ ಇವರು ತೃತೀಯ ಸ್ಥಾನ ಪಡೆದರು.
ಬಾಲಕರ 17 ರ ವಯೋಮಾನದ 110 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಪ್ರೀತಮ್ ಡಿ.ಕೆ ಹತ್ತನೇ ತರಗತಿ ಇವರು ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡರು. ಹಾಗೂ 17ರ ವಯೋಮಾನದ ಬಾಲಕಿಯರ ಜಾವಲಿನ್ ಎಸೆತದಲ್ಲಿ ಧನ್ವಿತಾ ಎಂಟನೇ ತರಗತಿ ಇವರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಎಲ್ ಸಿ ಆರ್ ವಿದ್ಯಾಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ .











