27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

ಧರ್ಮಸ್ಥಳ: ವ್ತಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಮೂರು ದಶಕಗಳಿಂದ ಅವಿರತ ಶ್ರಮಿಸುತ್ತಿರುವ ವೇದಿಕೆಯ 2 ಸಾವಿರನೇ ಮದ್ಯವರ್ಜನ ಶಿಬಿರದ ಪ್ರಯುಕ್ತ ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶವು ಅಮೃತವರ್ಷಣಿ ಸಭಾಭವನ ಶ್ರೀ ಕ್ಷೇತ್ರದಲ್ಲಿ ನ 6 ರಂದು ನಡೆಯಿತು.

ಬೆಳಗಾವಿ ಹುಕ್ಕೇರಿ ಶ್ರೀಗುರು ಶಾಂತೇಶ್ವರ ಸಂಸ್ಥಾನ ಹಿರೇಮಠದ ಷ.ಬ್ರ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮನ ಪರಿವರ್ತನೆಯಿಂದ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದರು. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಶರಣಪ್ಪ ಸಲದಾಪುರ ಉದ್ಘಾಟಿಸಿ ಶುಭ ಕೋರಿದರು.

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷರಾದ ಮಾತೃಶ್ರೀ ಹೇಮಾವತಿ ವೀ ಹೆಗ್ಗಡೆಯವರು ಜನಜಾಗೃತಿ ಡಾಕ್ಯುಮೆಂಟ್ ಬಿಡುಗಡೆಗೊಳಿಸಿದರು.ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.ಬೆಂಗಳೂರು ಕ್ಷೇಮವನದ ಸಿಇಓ ಶ್ರದ್ದಾ ಅಮಿತ್ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕ, ಮುಂಬೈ ಸಮಾಜ ಸೇವಕರಾದ ಆರ್.ಬಿ.ಹೆಬ್ಬಳ್ಳಿ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್,ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೆಂದ್ರ ಕುಮಾರ್,ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್,ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ,ನಿಕಟಪೂರ್ವ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ ಹಾಗೂ ಟ್ರಸ್ಟಿಗಳು ಉಪಸ್ಥಿತರಿದ್ದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಾರ್ಯದರ್ಶಿ ವಿವೇಕ್ ವಿ ಪಾಯಿಸ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕೇಂದ್ರ ಕಚೇರಿಯ ಸಿಬ್ಬಂದಿಗಳಾದ ಸುಮಲತಾ, ಪ್ರಿಯ, ಸುಮಿತ್ರಾ ಪ್ರಾರ್ಥನೆಗೈದರು. ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯ ಮತ್ತು ಭಾಸ್ಕರ ಎನ್ ನಿರೂಪಿಸಿದರು.

Related posts

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya
error: Content is protected !!