September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರ ಹಿತ ರಕ್ಷಣಾ ವೇದಿಕೆಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರತೆಯ ವಿಚಾರವಾಗಿದ್ದು ಈ ಬಗ್ಗೆ ಸರಕಾರದ ಗಮನ ಸೆಳೆಯಲು ಮನವಿ ಸಲ್ಲಿಸಲಾಯಿತು.

ಹಿಂದೆ ಸರಕಾರ ರಬ್ಬರು ಕೃಷಿಗೆ ಹೆಚ್ಚಿನ ಮಹತ್ವ ನೀಡಿ ಸಹಾಯಧನ, ಸಾಲ ಹಾಗೂ ಇತರ ಪ್ರೋತ್ಸಾಹದೊಂದಿಗೆ ರಬ್ಬರು ಬೆಳೆಗೆ ಉತ್ತೇಜನ ನೀಡಿ ಹೆಚ್ಚಿನ ಕೃಷಿಕರು ತೊಡಗಿಸಿಕೊಳ್ಳುವಂತೆ ಮಾಡಲಾಗಿತ್ತು. ಇದೀಗ ರಬ್ಬರು ಆದಾಯ ಕೃಷಿ ಖರ್ಚು-ವೆಚ್ಚ ಸರಿದೂಗಿಸದೇ ಇದ್ದು ಅವಲಂಬಿತ ಕೃಷಿಕರು ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ಹಾಗೂ ಇದೀಗ ರಬ್ಬರು ಕೃಷಿಯನ್ನು ಹೊಸದಾಗಿ ಪ್ರಾರಂಭಿಸಲು ಆಸಕ್ತಿ ತೋರಿಸದೇ ಇರವ ಬಗ್ಗೆ ವಿವರಿಸಲಾಯಿತು. ಅಂತೆಯೇ ಕೇರಳ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಪ್ರೋತ್ಸಾಹಧನ ಯೋಜನೆಯನ್ನು ನಮ್ಮರಾಜ್ಯದಲ್ಲಿಯೂ ಜಾರಿಗೊಳಿಸಿ ಬೆಳೆಗಾರರನ್ನು ರಕ್ಷಿಸುವಂತೆ ವಿನಂತಿಸಲಾಯಿತು.

ಈ ಸಂಧರ್ಭದಲ್ಲಿ ವೇದಿಕೆಯ ಸಲಹೆಗಾರರಾದ ಹಿರಿಯ ಅರ್ಥಿಕತಜ್ಞ ಡಾ. ವಿಘ್ನೇಶ್ವರ ವರ್ಮುಡಿ, ರಬ್ಬರು ಮಂಡಳಿ ಸದಸ್ಯರಾದ ಮುಳಿಯ ಕೇಶವ ಭಟ್, ಸಂಯೋಜಕ ಅನಂತ ಭಟ್ ಎಂ, ಕಾರ್ಯದರ್ಶಿಗಳಾದ ರಾಜು ಶೆಟ್ಟಿ ಉಜಿರೆ, ವಿಜಯ ಕೃಷ್ಣ ಪೆರಾಜೆ ಮತ್ತು ರಾಕೇಶ್ ಮೆಟ್ಟಿನಡ್ಕ ಉಪಸ್ಥಿತರಿದ್ದರು.

Related posts

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಡ್ರಗ್ಸ್ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

Suddi Udaya

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya
error: Content is protected !!