ಮಚ್ಚಿನ: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್ ಸಿ ಆರ್ ವಿದ್ಯಾ ಸಂಸ್ಥೆಯ ಪದವಿ ವಿಭಾಗದಲ್ಲಿ ನ.6 ರಂದು ವಿದ್ಯಾರ್ಥಿಗಳಿಗೆ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ವಿದ್ಯಾರ್ಥಿಗಳಲ್ಲಿ ವಾಣಿಜ್ಯ ನಿರ್ವಹಣಾ ಕೌಶಲ್ಯ, ಸೃಜನಾತ್ಮಕತೆ ವೃದ್ಧಿಪಡಿಸುವುದರ ಜೊತೆಗೆ ವಾಣಿಜ್ಯ ಕ್ಷೇತ್ರದ ಅರಿವನ್ನು ಹೆಚ್ಚಿಸುವ ಉದ್ದೇಶದಿಂದ ಉಪನ್ಯಾಸಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳ ಪವರ್ ಸ್ಟ್ರೈಕರ್ ತಂಡವು ಚಟುವಟಿಕೆಯನ್ನು ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟಾನ್ ಲೋಬೊ, ಸಂಯೋಜಕರಾದ ಯಶವಂತ ಜಿ. ನಾಯಕ್, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಹಾಗೂ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.











