ಬೆಳ್ತಂಗಡಿ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ.ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ಪಂದ್ಯಕೂಟದಲ್ಲಿ ಯು ಕೀರ್ತೇಶ್ ಗೌಡ ರವರು ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ.
ಇವರು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ. ಪದ್ಮನಾಭ ಹಾಗೂ ಶ್ರೇಯಾ ದಂಪತಿಯ ಪುತ್ರರಾಗಿರುತ್ತಾರೆ. ಇವರಿಗೆ ಶಿಹಾನ್ ಅಬ್ದುಲ್ ರಹಮಾನ್ ರವರು ಕರಾಟೆ ತರಬೇತಿಯನ್ನು ನೀಡಿರುತ್ತಾರೆ.











