38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಪೃಥ್ವಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಕೊಕ್ಕಡ ವಲಯದ ಬರೆಂಗಾಯ ಕಾರ್ಯಕ್ಷೇತ್ರದಲ್ಲಿ ಪೃಥ್ವಿ ಜ್ಞಾನವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಬರೆಂಗಾಯ ಸಮುದಾಯ ಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ಉದ್ಘಾಟಿಸಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಹಮ್ಮಿಕೊಂಡ ಈ ಜ್ಞಾನ ವಿಕಾಸ ಕಾರ್ಯಕ್ರಮ ಸದುಪಯೋಗವನ್ನು ಎಲ್ಲರೂ ಪಡೆಯುವಂತೆ ಶುಭ ಕೋರಿದರು. ತಾಲೂಕಿನ ಯೋಜನಾಧಿಕಾರಿ ಯಶೋಧರ ಜ್ಞಾನ ವಿಕಾಸ ಕಾರ್ಯಕ್ರಮದ ಹಿನ್ನೆಲೆಯ ಬಗ್ಗೆ ಮಾತನಾಡುತ್ತಾ ಕೇಂದ್ರದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಉತ್ತಮ ಮಾಹಿತಿಗಳು ತರಬೇತಿಗಳು ಸಿಗುತ್ತಿದ್ದು ಅವಕಾಶವನ್ನು ಬಾಚಿಕೊಂಡು ಕಾರ್ಯಕ್ರಮದ ಸದುಪಯೋಗವನ್ನು ಪಡೆಯುವಂತೆ ಹಾಗೂ ಸಮಯ ಪಾಲನೆಯನ್ನು ಅಳವಡಿಸಿಕೊಳ್ಳುವ ಬಗ್ಗೆ ಮಾರ್ಗದರ್ಶನ ನೀಡಿದರು.

ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷ ಮಾದಪ್ಪ ಗೌಡ, ಒಕ್ಕೂಟದ ಮಾಜಿ ಅಧ್ಯಕ್ಷ ಶಾಂತರಾಮ್ ರೈ, ಕೇಂದ್ರದ ಸಂಯೋಜಕಿ ಗಾಯತ್ರಿ, ಪಂಚಾಯತಿ ಗ್ರಂಥಾಲಯ ವಿಭಾಗದ ಕಾರ್ಯಕರ್ತರಾದ ಶ್ರೀಮತಿ ಶಕುಂತಲಾ ಉಪಸ್ಥಿತರಿದ್ದರು. ಕೇಂದ್ರದ ದಾಖಲಾತಿಗಳನ್ನು ಹಸ್ತಾಂತರಿಸಲಾಯಿತು. ಸಮನ್ವಯಧಿಕಾರಿ ಮಧುರಾ ವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಗೀತಾ ಸ್ವಾಗತಿಸಿ, ಸೇವಾ ಪ್ರತಿನಿಧಿ ಆಶಲತ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಸಮಾಜಕಾರ್ಯ ಪದವೀಧರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸಿನರ್ಜಿ ಎಚ್‌ಆರ್‌ಡಿ ಸರಣಿ ಕಾರ್ಯಕ್ರಮ

Suddi Udaya

ತಾಲ್ಲೂಕು ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

Suddi Udaya
error: Content is protected !!