September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಪ್ರತಿವರ್ಷ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯನ್ನು ನಡೆಸಿಕೊಂಡು ಬರುತ್ತಿದ್ದು, ಈ ವರ್ಷ 23ನೇ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ನೀಡಿರುವ ವಿಷಯ: ಪ್ರಕೃತಿಯ ಸೊಬಗು. ಸ್ಪರ್ಧೆಯು ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಎಂದು ಪ್ರತ್ಯೇಕ 4 ವಿಭಾಗಗಳಲ್ಲಿ ನಡೆಯಲಿದೆ.

ಪ್ರಕೃತಿಯ ಅತೀ ಸುಂದರವಾದ ದೃಶ್ಯಗಳನ್ನು ಬಿಡಿಸಿ ಕಳುಹಿಸಬಹುದು. 20*4 ಸೆಂ.ಮೀ ಗಾತ್ರದ ಡ್ರಾಯಿಂಗ್ ಶೀಟ್ ಅಥವಾ ಅಂಚೆ ಕಾರ್ಡಿನಲಿ, ಪೆನ್ಸಿಲ್/ ಇಂಡಿಯನ್ ಇಂಕ್, ಜಲವರ್ಣ ಬಳಸಿ ಚಿತ್ರ ಬಿಡಿಸುವುದು. ಶಾಲಾ/ಕಾಲೇಜು ವಿಭಾಗದವರು ಶಾಲಾ ಮುದ್ರೆ ಹಾಗೂ ಮುಖ್ಯಸ್ಥರ ಸಹಿ, ತಮ್ಮ ಪೂರ್ಣ ವಿಳಾಸ ಹಾಗೂ ದೂರವಾಣಿ ಸಂಖ್ಯೆಯೊಂದಿಗೆ ನಿರ್ದೇಶಕರು, ಅಂಚೆ-ಕುಂಚ ವಿಭಾಗ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ- 574216, ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ, ಇವರಿಗೆ ದಿನಾಂಕ: 31-03-2026ರ ಒಳಗಾಗಿ ಕಳುಹಿಸಬೇಕು. ಸ್ಪರ್ಧಾ ವಿಜೇತರಿಗೆ ನಗದು ಬಹುಮಾನ, ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಪುರಸ್ಕರಿಸಲಾಗುವುದು ಎಂದು ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya
error: Content is protected !!