25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

ಬೆಳ್ತಂಗಡಿ: ಹಿಂದೂ ಧರ್ಮದ ಪರವಾಗಿ ಸಮಾಜ ಪರಿವರ್ತನೆ ಕಾರ್ಯ ಮಾಡುತ್ತಿರುವ ಪ. ಪೂ. ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರ ಮೇಲೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆ ಪ್ರವೇಶ ನಿಷೇಧಿರಿಸುವುದು ಸಂಪೂರ್ಣವಾಗಿ ಸಂವಿಧಾನಾತ್ಮಕ ಹಕ್ಕುಗಳ ಉಲ್ಲಂಘನೆ ಆಗಿದ್ದು, ಧಾರ್ಮಿಕ ಸಹಿಷ್ಣುತೆಗೂ ಧಕ್ಕೆಯಾಗಿದ್ದು ರಾಜ್ಯಪಾಲರು ಈ ನಿಷೇಧದ ವಿಚಾರದಲ್ಲಿ ಸಂವಿಧಾನ ಪ್ರಕಾರ ಸೂಕ್ತ ತನಿಖೆ ನಡೆಸಿ ಈ ನಿಷೇಧವನ್ನು ತಕ್ಷಣ ರದ್ದುಪಡಿಸುವಂತೆ ಕೋರಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಲಾಯಿತು.

ಕಳೆದ ಶತಮಾನಗಳಿಂದ ರಾಷ್ಟ್ರದ ಸಂಕಷ್ಟದ ಸಂದರ್ಭಗಳಲ್ಲಿ ಸಂಘವು ನಿರಪೇಕ್ಷ ಸೇವೆ ಸಲ್ಲಿಸಿರುವುದು ರಾಷ್ಟ್ರಪ್ರೇಮದ ನಿದರ್ಶನವಾಗಿದೆ. ಇಂತಹ ಸಂಸ್ಥೆಯ ಮೇಲೆ ಕೋಮುವಾದ ದ್ವೇಷ ಅಥವಾ ಸಂವಿಧಾನ ಬಾಹಿರ ಕ್ರಿಯೆಗಳಲ್ಲಿ ತೊಡಗಿದೆ ಎಂಬ ಆರೋಪಗಳನ್ನು ರಾಜಕೀಯ ಉದ್ದೇಶಕ್ಕಾಗಿ ಮಾಡುವುದು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ದಂಡನೀಯ ಅಪರಾಧವಾಗಿದೆ. ಸರಕಾರವು ಕೂಡಲೆ ಸಂಘದ ವಿರುದ್ಧ ಸುಳ್ಳು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ. ಅದೇ ರೀತಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವಾ ಸಂಸ್ಥೆಯಾಗಿದ್ದು, ಕೇಂದ್ರ ಸರಕಾರದ ಆಜ್ಞೆ ಪ್ರಕಾರ ಸರ್ಕಾರಿ ನೌಕರರು ಸಾಮಾಜಿಕ ಸಂಸ್ಥೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಲಾಗಿಲ್ಲ. ಹೀಗಿರುವಾಗ ಸರಕಾರಿ ನೌಕರರು ಸಂಘದ ಪಥಸಂಚಲನದಲ್ಲಿ ಭಾಗವಹಿಸಿದ ಕಾರಣಕ್ಕೆ ಅವರನ್ನು ಅಮಾನತು ಮಾಡಿರುವುದು ಅಧಿಕಾರದ ದುರ್ಬಳಕೆ ಹಾಗೂ ಸಂವಿಧಾನ ಬಾಹಿರ ಕ್ರಮವಾಗಿದೆ. ಆದ್ದರಿಂದ ಅವರ ಅಮಾನತು ಆದೇಶವನ್ನು ತಕ್ಷಣ ರದ್ದುಪಡಿಸಲು ಹಾಗೂ ಜವಾಬ್ದಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮೂಲಕ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಮೇಶ ಬಂಗೇರ ಕಾರ್ಯದರ್ಶಿಗಳು ಮಹಮಾಯಿ ಭಜನಾ ಮಂದಿರ ಪಿಲ್ಯ, ಯೋಗೀಶ್, ನಿಕಟ ಪೂರ್ವ ಅಧ್ಯಕ್ಷರು ಕೊಕ್ಕಡ ಪಂಚಾಯತ್, ರಾಮನಾಥ ಮದಡ್ಕ, ಕೇಶವ ಅಚ್ಚಿನಡ್ಕ, ತಾರಾನಾಥ್ ಕಳೆಂಜ, ಯೋಗೀಶ್ ಕೆಂಬರ್ಜೆ ಹಾಗೂ ಹರೀಶ್ ಮುದ್ದಿನಡ್ಕ ಮುಂತಾದವರು ಉಪಸ್ಥಿತರಿದ್ದರು.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!