25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಉಜಿರೆ: ನಮ್ಮ ದೇಹ ಪ್ರಕೃತಿಗೆ ಅನುಗುಣವಾಗಿ ಆಹಾರ ಮತ್ತು ನೀರನ್ನು ಸೇವಿಸಬೇಕು. ಕಾಲಕ್ಕೆ ತಕ್ಕಂತೆ ನಮ್ಮ ಆಹಾರ ಕ್ರಮಗಳಲ್ಲಿಯೂ ಬದಲಾವಣೆ ಮಾಡಿಕೊಳ್ಳಬೇಕು. ಆಹಾರಾದಿಗಳನ್ನು ಎಷ್ಟು ತಿನ್ನುತ್ತೇವೆ ಎನ್ನುವುದು ಮುಖ್ಯವಲ್ಲ ಹೇಗೆ ತಿನ್ನುತ್ತೇವೆ ಎನ್ನುವುದು ಮುಖ್ಯ. ದೈಹಿಕ , ಮಾನಸಿಕ ಹಾಗೂ ಆಧ್ಯಾತ್ಮಿಕ ವ್ಯಕ್ತಿತ್ವಕ್ಕೂ ಆಹಾರ ಪ್ರಭಾವ ಬೀರುತ್ತದೆ. ಯಾವಾಗಲೂ ಸತ್ತ್ವಭರಿತ ಆಹಾರಗಳನ್ನು ಆದಷ್ಟು ಸೇವಿಸಬೇಕು. ಮಿತವಾದ , ಶುಚಿಯಾದ ಆಹಾರ ಕ್ರಮ ಯಾವಾಗಲೂ ಉತ್ತಮ. ಒಟ್ಟಾರೆ ಆಹಾರವೇ ಔಷಧವಾಗಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ಭಾಷಿಣಿ ಧರ್ಮಸ್ಥಳ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವತಿಯಿಂದ ನಡೆದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು.
ದೀಕ್ಷಾ ಸ್ವಾಗತಿಸಿ , ಐಶ್ವರ್ಯಾ ಪಿ ಶೆಟ್ಟಿ ಪರಿಚಯಿಸಿದರು. ಅಹಲ್ಯಾ ಬೆಂಡೆ ನಿರೂಪಿಸಿ , ಅನುಜ್ಞಾ ರಾವ್ ವಂದಿಸಿದರು.

Related posts

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya
error: Content is protected !!