ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ , ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ನಿ.,) ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.) ಬೆಳ್ತಂಗಡಿ ತಾಲೂಕು ಇವರ ನೇತೃತ್ವದಲ್ಲಿ ದ. ಕ. ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ 2025 ಉದ್ಘಾಟನಾ ಸಮಾರಂಭ ವು ನ. 14ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಲಿದೆ.
ಸಹಕಾರಿ ಧ್ವಜಾರೋಹಣವನ್ನು ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಜೋಯಲ್ ಮೆಂಡೋನ್ಸಾ, ಸಹಕಾರಿ ಜಾಥಾ ಉದ್ಘಾಟನೆಯನ್ನು ಧರ್ಮಸ್ಥಳ ಎಸ್.ಕೆ.ಡಿ.ಆರ್ .ಡಿ ಪಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್. ಎಸ್ , ಪುರಾತನ ಕೃಷಿ ಸಾಮಾಗ್ರಿ ವಸ್ತುಗಳ ಪ್ರದರ್ಶನ ಉದ್ಘಾಟನೆಯನ್ನು ಮಂಗಳೂರು ಸಂಸದ ಕ್ಯಾ| ಬ್ರಿಜೇಶ್ ಚೌಟ, ಸಹಕಾರ ಸಪ್ತಾಹದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ. ಗಿಡ ನೆಡುವ ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ವಹಿಸಲಿದ್ದಾರೆ.
ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಬೊಟ್ಯಾಡಿ, , ವಿದ್ಯುತ್ ಸರಬರಾಜು ಮಂಡಳಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ,ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪಿ.,ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಸತೀಶ್ ಕೆ. ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ.











