September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

ಬೆಳ್ತಂಗಡಿ: ಮಾಲಾಡಿಯಲ್ಲಿ ಮನೆ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಪುಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದ ಘಟನೆ ನ.9ರಂದು ನಡೆದಿದೆ.

ಘಟನೆ ವಿವರ: ಮಾಲಾಡಿ ನಿವಾಸಿ ಪ್ರಕಾಶ್‌ ಶೆಟ್ಟಿ (53) ಎಂಬವರ ದೂರಿನಂತೆ, ಸದ್ರಿಯವರ ಮನೆಯ ಸಮೀಪ ಶ್ರೀಮತಿ ಪ್ರೇಮಾ ಶೆಟ್ಟಿ ಎಂಬವರ ಮನೆಯಿದ್ದು, ಪ್ರೇಮಾ ಶೆಟ್ಟಿರವರು ಕೆಲ ಸಮಯದಿಂದ ವಿದೇಶದಲ್ಲಿದ್ದು, ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಗೆ ಸಿ.ಸಿ ಟಿ.ವಿ ಅಳವಡಿಸಿರುತ್ತಾರೆ. ನ.9 ರಂದು ಬೆಳಿಗ್ಗೆ, ಪ್ರೇಮಾರವರ ಮಗಳು ಪ್ರಕಾಶ ಶೆಟ್ಟಿ ರವರಿಗೆ ಕರೆ ಮಾಡಿ ಅವರ ತಾಯಿಯ ಮನೆಯಲ್ಲಿ ಯಾರೋ ವ್ಯಕ್ತಿ ಕಳ್ಳತನಕ್ಕೆ ಬಂದಿರುವಂತೆ ಸಿ.ಸಿ ಟಿ.ವಿಯಲ್ಲಿ ಕಾಣುತ್ತಿರುವುದಾಗಿ ತಿಳಿಸಿರುತ್ತಾರೆ. ತಕ್ಷಣ ಪ್ರಕಾಶ್‌ ಶೆಟ್ಟಿ ಪ್ರೇಮರವರ ಮನೆಯ ಬಳಿ ತೆರಳಿ ನೋಡಿದಾಗ, ಪ್ರೇಮಾರವರ ಮನೆಯ ಮೇಲ್ಚಾವಣಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿಯು ಕೈಯಲ್ಲಿ ಕಬ್ಬಿಣದ ರಾಡ್ ಹಿಡಿದು ನಿಂತುಕೊಂಡಿದ್ದು, ಪ್ರಕಾಶ್‌ ಶೆಟ್ಟಿ ರವರನ್ನು ನೋಡಿ ಕೆಳಗೆ ಹಾರಿ ಓಡಿ ತಪ್ಪಿಸಲು ಪ್ರಯತ್ನಿಸಿರುತ್ತಾನೆ.

ಈ ವೇಳೆ ಪ್ರಕಾಶ್‌ ಶೆಟ್ಟಿ ರವರು ಆತನನ್ನು ಹಿಡಿಯಲು ಪ್ರಯತ್ನಿಸಿದಾಗ, ಅಪರಿಚಿತ ವ್ಯಕ್ತಿಯು ಆತನ ಕೈಯಲ್ಲಿದ್ದ ರಾಡಿನಿಂದ ಹಲ್ಲೆ ನಡೆಸಿರುತ್ತಾನೆ. ಬಳಿಕ ಸ್ಥಳೀಯ ನಿವಾಸಿಗಳ ಸಹಾಯದಿಂದ ಅಪರಿಚಿತ ವ್ಯಕ್ತಿಯನ್ನು ಹಿಡಿಯಲಾಗಿರುತ್ತದೆ. ಆತನ ಬಗ್ಗೆ ವಿಚಾರಿಸಲಾಗಿ ಆತನು ಕೇರಳ ಮೂಲದ, ತಲಪಾಡಿ ನಿವಾಸಿ ಕಿರಣ್ ಎಂಬುದಾಗಿ ತಿಳಿಸಿದ್ದು, ನಂತರ ಆತನನ್ನು ಪುಂಜಾಲಕಟ್ಟೆ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಲಾಗಿರುತ್ತದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ: 73/2025, ಕಲಂ: 331(1) 62 118(1) 307 BNS ACT ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಆರೋಪಿತನ ಪ್ರಾಥಮಿಕ ವಿಚಾರಣೆಯ ವೇಳೆ ಆರೋಪಿತನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ, ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾಗೂ ಕೇರಳ ರಾಜ್ಯದಲ್ಲಿ ಸೇರಿದಂತೆ, ಒಟ್ಟು 13 ಪ್ರಕರಣಗಳು
ದಾಖಲಾಗಿರುವುದು ತಿಳಿದುಬಂದಿದ್ದು, ತನಿಖೆ ಮುಂದುವರಿದಿರುತ್ತದೆ.

Related posts

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

Suddi Udaya
error: Content is protected !!