September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಮುಂಬಯಿ ಸಾಂತಾಕ್ರೂಜ್, ಬಿಲ್ಲವ ಭವನಕ್ಕೆ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯ ಮತ್ತು ಗೆಜ್ಜಗಿರಿ ಅಭಿವೃದ್ಧಿ ಟ್ರಸ್ಟಿನ ನಿಯೋಗ ಬೇಟಿ ನೀಡಿ ಮುಂಬಯಿ ಬಿಲ್ಲವ ಅಸೋಸಿಯೇಷನ್ ನ ಅಧ್ಯಕ್ಷ ಹರೀಶ್ ಜಿ ಅಮೀನ್ ರವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರದ ಭಕ್ತಾದಿಗಳ ಸೇವೆಗಾಗಿ ನಿರ್ಮಾಣಗೊಳ್ಳುತ್ತಿರುವ ಅನ್ನಛತ್ರ ಮತ್ತು ಯಾತ್ರಿ ನಿವಾಸದ ನೂತನ ಕಟ್ಟಡಗಳ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆಯ ಬಿಡುಗಡೆ ಮಾಡಿದರು.

ಮುಂಬೈನ ಎಲ್ಲಾ ಬಿಲ್ಲವ ಸಮಾಜ ಬಾಂಧವರನ್ನು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಾನಿಧ್ಯ ಶಕ್ತಿಗಳ ಅನುಗ್ರಹಕ್ಕೆ ಪಾತ್ರರಾಗುವಂತೆ ಮನವಿ ಮಾಡಲಾಯಿತು. ಈ ಸಂದರ್ಭ ಬಿಲ್ಲವ ಅಸೋಸಿಯೇಷನ್ ಅಧ್ಯಕ್ಷರು 20 ಲಕ್ಷ ರೂಪಾಯಿಗಳ ನೆರವನ್ನು ಒದಗಿಸುವುದರೊಂದಿಗೆ 10 ಕೊಠಡಿಗಳ ನಿರ್ಮಾಣ ಕಾರ್ಯಕ್ಕೆ ಸಹಕಾರವನ್ನು ನೀಡುವ ಭರವಸೆಯನ್ನು ನೀಡಿದರು ಇದರೊಂದಿಗೆ ಬಂಧುಗಳಿಂದ ತನು ಮನ ಧನದ ಸಹಕಾರ ನೀಡುವಂತೆ ಮನವಿ ಮಾಡಿದರು. ಅಮೃತ ಮಹೋತ್ಸವ ಆಚರಿಸುತ್ತಿರುವ ಪೀತಾಂಬರ ಹೆರಾಜೆ ಯವರನ್ನು ಬಿಲ್ಲವ ಅಸೋಸಿಯೇಷನ್ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಭಿವೃದ್ಧಿ ಟ್ರಸ್ಟಿನ ಗೌರವಾಧ್ಯಕ್ಷ ಡಾ. ರಾಜಶೇಖರ್ ಕೋಟ್ಯಾನ್, ಬಿಲ್ಲವ ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಎನ್ ಟಿ ಪೂಜಾರಿ, ಉದ್ಯಮಿಗಳಾದ ಗಂಗಾಧರ ಅಮಿನ್ , ಬಿಲ್ಲವ ಅಸೋಸಿಯೇಷನ್ ನ ಗೌರವಾಧ್ಯಕ್ಷ ಎಲ್ ವಿ ಅಮಿನ್, ಉಪಾಧ್ಯಕ್ಷರಾದ ಪುರುಷೋತ್ತಮ್ ಕೋಟ್ಯಾನ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ ಸಾಲಿಯಾನ್, ಕ್ಷೇತ್ರ ಆಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಅಭಿವೃದ್ಧಿ ಟ್ರಸ್ಟಿನ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವಾ, ಉಪಾಧ್ಯಕ್ಷ ದೀಪಕ್ ಕೋಟ್ಯಾನ್, ಕೋಶಾಧಿಕಾರಿ ಹರೀಶ್ ಸಾಲಿಯಾನ್ ಬಜಗೋಳಿ, ಕ್ಷೇತ್ರಾಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಾ| ರಾಜಾರಾಮ್ ಕೆ ಬಿ, ಜೊತೆ ಕಾರ್ಯದರ್ಶಿ ಡಾ ಸಂತೋಷ್ ಕುಮಾರ್ ಬೈರಂಪಳ್ಳಿ, ಟ್ರಸ್ಟಿ, ವಾಸ್ತುಶಿಲ್ಪಿ ಪ್ರಮಲ್ ಕುಮಾರ್ ಕಾರ್ಕಳ, ಟ್ರಸ್ಟಿಗಳಾದ ಕುಮಾರ್ ಇರುವೈಲ್, ಸುರೇಶ್ ಪೂಜಾರಿ, ನೀಲೇಶ್ ಪೂಜಾರಿ ಹಾಗೂ 22 ಸ್ಥಳೀಯ ಬಿಲ್ಲವ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಮುಖಂಡರು, ಮುಂಬಯಿನ ಇತರ ಸಮಾಜ ಬಾಂಧವರು ಉಪಸ್ಥಿತರಿದ್ದರು..

Related posts

ತ್ರೋಬಾಲ್ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಷನ್ ಅಳದಂಗಡಿ ವಲಯದ ವಾರ್ಷಿಕ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!