ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಣೆ

ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ 150ನೇ ಜನ್ಮದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸವನ್ನು ಕಾಲೇಜಿನಲ್ಲಿ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ಏಕತಾ ದಿವಸದ ಮಹತ್ವ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿಗಳಾದ ಬಿಎ ಶಮಿವುಲ್ಲಾ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭ ಹಾರೈಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹ ಕಾರ್ಯಕ್ರಮ ಅಧಿಕಾರಿಗಳಾದ ಸತೀಶ್ ಧನ್ಯವಾದಗೈದರು.

ರಾಷ್ಟ್ರೀಯ ಸೇವಾ ಯೋಜನೆ ಘಟಕದ ನಾಯಕ ಆಶಿಕ್ ದ್ವಿತೀಯ ಬಿಕಾಂ ರಾಷ್ಟ್ರೀಯ ಏಕತಾ ಜಾತವನ್ನು ಏರ್ಪಡಿಸಿದರು. ಕಾಲೇಜಿನಿಂದ ಬೆಳ್ತಂಗಡಿ ಪೇಟೆಯವರಿಗೆ ರಾಷ್ಟ್ರೀಯ ಏಕತಾ ಜಾಥವನ್ನು ನಡೆಸಲಾಯಿತು. ಎಲ್ಲ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya
error: Content is protected !!