September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರೆ

ಬೆಳ್ತಂಗಡಿ: ಚಾರಣಿಗರ ಸ್ವರ್ಗ ಗಡಾಯಿಕಲ್ಲು ಏರಲು ಹೇರಿದ್ದ ನಿರ್ಬಂಧವನ್ನು ಹಿಂಪಡೆಯಲಾಗಿದ್ದು ಇದೀಗ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಬೇಸಿಗೆಯಿಂದ ಗಡಾಯಿಕಲ್ಲು ಪ್ರವೇಶಕ್ಕೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದ್ದು ಅದು ನ.೮ರ ತನಕವು ಮುಂದುವರಿದಿತ್ತು ಗಡಾಯಿಕಲ್ಲು ಸುತ್ತಮುತ್ತ ಸಾಕಷ್ಟು ಅರಣ್ಯ ಪ್ರದೇಶವಿದ್ದು ಬೇಸಿಗೆಕಾಲದಲ್ಲಿ ಕಾಡ್ಗಿಚ್ಚಿನ ಭಯ ಇರುವುದರಿಂದ ಹಾಗೂ ಮಳೆಗಾಲದಲ್ಲಿ ಇಲ್ಲಿನ ಜಾರುವ ಬಂಡೆ, ಮೆಟ್ಟಿಲು,ಕಲ್ಲುಗಳಿಂದ ಅಪಾಯ ಉಂಟಾಗಬಾರದು ಎಂಬ ಉದ್ದೇಶದಿಂದ ಸಂಬAಧಪಟ್ಟ ಇಲಾಖೆ ಪ್ರವೇಶ ನಿಷೇಧ ಹೇರಿತ್ತು. ಇತ್ತೀಚೆಗೆ ಜಲಪಾತ ಪ್ರವೇಶಕ್ಕೆ ಅವಕಾಶ ನೀಡಿದ ಸಮಯವೂ ಮುಂಜಾಗ್ರತಾ ಕ್ರಮವಾಗಿ ಗಡಾಯಿಕಲ್ಲು ಪ್ರವೇಶ ನಿಷೇಧ ಮುಂದುವರಿದಿದತ್ತು. ಇದೀಗ ಮಳೆ ಕಡಿಮೆಯಾಗಿ ಬಂಡೆ ಒಣಗಿರುವ ಕಾರಣ ಅವಕಾಶ ಕಲ್ಪಿಸಲಾಗಿದೆ.
ಪ್ರಸ್ತುತ ನೀಡಿರುವ ಅವಕಾಶ ಡಿಸೆಂಬರ್ ತನಕ ಮುಂದುವರಿಯುವ ಸಾಧ್ಯತೆ ಇದೆ ಡಿಸೆಂಬರ್ ಬಳಿಕ ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ಮತ್ತೆ ನಿಷೇಧ ಮುಂದುವರಿಯುವ ಸಾಧ್ಯತೆ ಇದೆ.

ಬೆಳ್ತಂಗಡಿ ತಾಲೂಕು ಕೇಂದ್ರದಿಂದ ಒಂದು ಕಿಮೀ ದೂರದಲ್ಲಿರುವ ಲಾಯಿಲ ಎಂಬಲ್ಲಿಂದ ಕಿಲ್ಲೂರು ಮಾರ್ಗದಲ್ಲಿ ೫ ಕಿಮೀ ಸಾಗಿದರೆ ಮಂಜೊಟ್ಟಿ ಎನ್ನುವ ಊರು ಸಿಗುತ್ತದೆ ಅಲ್ಲಿಂದ ಮೂರು ಕಿಮೀ ಹಾದಿ ಕ್ರಮಿಸಿದರೆ ಗಡಾಯಿಕಲ್ಲಿನ ಬುಡಕ್ಕೆ ತಲುಪಬಹುದು ಮಂಜೊಟ್ಟಿ ತನಕ ಬಸ್ ವ್ಯವಸ್ಥೆ ಇದೆ .ಸ್ವಂತ ವಾಹನಗಳಿಗೆ ಕೋಟೆಯ ಸಮೀಪ ಪಾರ್ಕಿಂಗ್ ವ್ಯವಸ್ಥೆಯು ಇದೆ. ಗೂಗಲ್ ಮ್ಯಾಪ್ ನಲ್ಲಿ ದಾರಿಯ ಹೆಚ್ಚಿನ ವಿವರಗಳು ಲಭ್ಯವಿದೆ. ಗಡಾಯಿಕಲ್ಲಿಗೆ ಜಮಲಾಬಾದ್ ನರಸಿಂಹ ಘಡ ಎಂಬ ಹೆಸರುಗಳು ಇವೆ.

ಸಮುದ್ರ ಮಟ್ಟದಿಂದ ೧೭೮೮ ಅಡಿ ಎತ್ತರದಲ್ಲಿರುವ ಈ ಕೋಟೆಯ ತುದಿ ತಲುಪಬೇಕಾದರೆ ಸುಮಾರು ೨೮೦೦ಕ್ಕೂ ಅಧಿಕ ಕಡಿಗದಾದ ಮೆಟ್ಟಿಲುಗಳನ್ನು ಏರಬೇಕು. ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಗಡಾಯಿ ಕಲ್ಲನ್ನು ಸಂರಕ್ಷಿತ ಸ್ಮಾರಕ ಎಂದು ಘೋಷಿಸಿದೆ. ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗಡಾಯಿಕಲ್ಲು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಸುಪರ್ದಿಯಲ್ಲಿದೆ. ಅನೇಕ ಪಳೆಯುಳಿಕೆ ಹೊಂದಿರುವ ಗಡಾಯಿ ಕಲ್ಲು ಮುಕ್ಕಾಲು ಭಾಗ ಏರಿದ ಬಳಿಕ ಕಮಾನುಗೋಚರಿಸುತ್ತದೆ. ಶಿಥಿಲಾವಸ್ಥೆಯಲ್ಲಿರುವ ಅದರ ಅಕ್ಕಪಕ್ಕ ಕೆಲವೊಮ್ಮೆ ತ್ಯಾಜ್ಯವೂ ಕಂಡು ಬರುತ್ತದೆ, ಮುಂದೆ ಸಾಗಿದಾಗ ಫಿರಂಗಿ, ಬಂಡೆಗಳ ನಡುವಿನಿಂದ ಹರಿಯುವ ನೀರು ಭಾಗಶಃ ಧ್ವಂಸವಾಗಿರುವ ಶಸ್ತ್ರಾಸ್ತ್ರ ಕೋಠಿ,ಕೆರೆ ಇತ್ಯಾದಿ ಕಾಣಿಸುತ್ತದೆ. ನಿಸರ್ಗ ಸೌಂದರ್ಯವನ್ನು ಆಸ್ವಾದಿಸುತ್ತ ಚಾರಣ ನಡೆಸುವ ಗಡಾಯಿಕಲ್ಲು ಹಲವಾರು ಎಕರೆ ಜಾಗವನ್ನು ಹೊಂದಿದ್ದು ಚಾರಣ ನಡೆಸಿ ಬರುವ ಪ್ರವಾಸಿಗರ ಮನಸ್ಸಿಗೆ ಮುದ ನೀಡುತ್ತಿದೆ.


+ಟಿಕೆಟ್ ದರ ದೊಡ್ಡವರಿಗೆ 50ರೂ., ಮಕ್ಕಳಿಗೆ 25 ರೂ.
+ಪರಿಸರದ ಅರಣ್ಯದಲ್ಲಿರುವ ಪ್ರಾಣಿಗಳಿಗೆ ತೊಂದರೆ ಉಂಟು ಮಾಡುವಂತಹ ಪ್ರಕ್ರಿಯೆ ನಡೆಸಬಾರದು
+ಪರಿಸರ ಸ್ವಚ್ಛತೆ ಕಾಪಾಡಲು ಚಾರಣಿಗರು ಆದ್ಯತೆ ನೀಡಬೇಕು
+ಇಲಾಖೆ ವಿಧಿಸಿದ ಶರತ್ತುಗಳನ್ನು ಮೀರಿ ವರ್ತಿಸಬಾರದು
+ಅನಪೇಕ್ಷಿತ ಚಟುವಟಿಕೆ ನಡೆಸುವುದು ಕಂಡು ಬಂದಲ್ಲಿ ಅಂತವರ ವಿರುದ್ಧ ಇಲಾಖೆ ವತಿಯಿಂದ ಕಠಿಣ ಕ್ರಮ ಕೈಗೊಳ್ಳಲಾಗುವುದು
+ಸಂಪೂರ್ಣ ಪ್ಲಾಸ್ಟಿಕ್ ನಿಷೇಧಿತ ಪ್ರದೇಶ
“ಗಡಾಯಿಕಲ್ಲಿಗೆ ಬೆಳಿಗ್ಗೆ 7ರಿಂದ ಮಧ್ಯಾಹ್ನ 2 ಗಂಟೆವರೆಗೆ ಏರಲು ಅವಕಾಶ ನೀಡಲಾಗಿದೆ ಗಡಾಯಿಕಲ್ಲಿನಲ್ಲಿ ರಾತ್ರಿ ವಾಸ್ತವ್ಯಕ್ಕೆ ಅವಕಾಶವಿರುವುದಿಲ್ಲ. ಇಲಾಖೆ ನಿಗದಿ ಪಡಿಸಿದ(kuduremukhanationalpark.in) ವೆಬ್‌ಸೈಟ್ ನಲ್ಲಿ ನೋಂದಾಯಿಸಿಕೊಳ್ಳಬೇಕು. ಇಲ್ಲಿನ ಸ್ಥಳಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

Related posts

ಬಳಂಜ ಶಾಲಾ ಶಿಕ್ಷಣ ಚಟುವಟಿಕೆಗಳಿಗಾಗಿ,ಯಕ್ಷಪ್ರಿಯ ಸಮಿತಿಯಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ “ನಾಗಾರತಿ”:ಅರುವ ಕೊರಗಪ್ಪ ಶೆಟ್ಟಿ,ಲಲಿತಾ ಟೀಚರ್,ಉಸ್ಮಾನ್ ಕೆ ಅವರಿಗೆ ಸನ್ಮಾನ,ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಾರ್ಪಣೆ:ಸಾವಿರಾರು ಕಲಾಭಿಮಾನಿಗಳಿಂದ ಯಕ್ಷಗಾನ ವಿಕ್ಷಣೆ,ಅಚ್ಚುಕಟ್ಟಾದ ವ್ಯವಸ್ಥೆ,ಸಾರ್ವಜನಿಕ ಅನ್ನಸಂತರ್ಪಣೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

Suddi Udaya
error: Content is protected !!