25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಕ್ರೀಡಾಕೂಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

ಮಡಂತ್ಯಾರು: 14 ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವು ನ. 6 ಮತ್ತು 7ರಂದು ಗಾರ್ಡಿಯನ್ ಏಂಜಲ್ಸ್ ಹಿರಿಯ ಪ್ರಾಥಮಿಕ ಶಾಲೆ, ಮಡಂತ್ಯಾರು ಇವರ ಸಹಯೋಗದಲ್ಲಿ ಸೇಕ್ರೆಡ್ ಹಾರ್ಟ್ ಕ್ರೀಡಾಂಗಣದಲ್ಲಿ ನಡೆಯಿತು.

ಕ್ರೀಡಾಕೂಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಾದ ನಿಖಿಲ್, ಮನ್ವಿತ್ ರವರು ಪ್ರಥಮ ಸ್ಥಾನವನ್ನು ಪಡೆದು ಹಾಗೂ 17ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ವಿದ್ಯಾರ್ಥಿಯಾದ ಫ್ಲಾಯ್ಡ್ ಮಿಸ್ಕಿತ್ ಮತ್ತು ಬಾಲಕಿಯರ ವಿಭಾಗದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯಾದ ವಿಶ್ಮಿತ ಪ್ರಭುರವರು ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 17ರ ವಯೋಮಾನದ ಬಾಲಕರ ರಿಲೆ ಸ್ಪರ್ಧೆಯಲ್ಲಿ 10ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ , ಫಾಯಿಝ್, ಆರನ್ ಸ್ಮಿತ್, ರೋಯಲ್ ಮೊರಸ್ ರವರು ದ್ವಿತೀಯ ಸ್ಥಾನವನ್ನು ಮತ್ತು 14ರ ವಯೋಮಾನದ ಬಾಲಕರ ವಿಭಾಗದಲ್ಲಿ ೮ನೇ ತರಗತಿಯ ವರ್ಣಿತ್ ರವರು ಮತ್ತು 17ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಮಿಥುನ್ ರವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರಿಗೆ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥರವರು ತರಬೇತಿಯನ್ನು ನೀಡಿರುತ್ತಾರೆ.

Related posts

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ ಪ್ರಾರಂಭೋತ್ಸವ

Suddi Udaya

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya
error: Content is protected !!