25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಬರೆಂಗಾಯದ ಸರಕಾರಿ ಉನ್ನತೀಕರಿಸಿದ ಹಿರಿಯಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.

ನಿಡ್ಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ಯಾಮಲಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು “ರಾಷ್ಟೀಯ ಸೇವಾ ಯೋಜನೆಯು ದೇಶ ಸೇವೆಯಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತದೆ. ಶಿಬಿರಾರ್ಥಿಗಳು ಶಿಬಿರದಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡಾಗ ಉತ್ತಮ ಸ್ವಯಂ ಸೇವಕರಾಗಲು ಸಾಧ್ಯ” ಎoದು ಹೇಳಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ “ಎನ್ಎಸ್ ಎಸ್ ಮೂಲಕ ವ್ಯಕ್ತಿಯ ಸಂಪೂರ್ಣವಾದ ಬೆಳವಣಿಗೆ ಆಗುತ್ತದೆ. ಗ್ರಾಮಗಳ ಅಭಿವೃದ್ಧಿ ಎನ್ ಎಸ್ ಎಸ್ ನ ಮೂಲ ಉದ್ದೇಶ. ಜೊತೆಗೆ ದೇಶದಲ್ಲಿ ಬಹುದೊಡ್ಡ ಯುವ ಶಕ್ತಿಯನ್ನು ನಿರ್ಮಾಣ ಮಾಡಲು ಸಾಧ್ಯವಾಗುತದೆ” ಎಂದು ಹೇಳಿದರು.

ನಿಡ್ಲೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಹಾಗೂ ಎಸ್ ಡಿ ಎಮ್ ಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ ನಶಾ ಮುಕ್ತ ಭಾರತ ಕುರಿತ ಕರ ಪತ್ರವನ್ನು ಬಿಡುಗಡೆಗೊಳಿಸಿದರು.
ನಿಡ್ಲೆ ಗ್ರಾಮ ಪಂಚಾಯತ್ ಸದಸ್ಯರಾದ ಶೈಲಜಾ, ನಿಸರ್ಗ ಯುವಜನೇತರ ಮಂಡಲದ ಗೌರವ ಅಧ್ಯಕ್ಷರಾದ ನವೀನ್ ಕುಮಾರ್ ಗಾoತ್ರoಡ, ಬೆರoಗಾಯ ಶಾಲೆಯ ಮುಖ್ಯ ಶಿಕ್ಷಕರಾದ ಗೋಪಾಲ್, ಯೋಜನಾಧಿಕಾರಿ ವಿಶ್ವನಾಥ್ ಎಸ್ ಸಹ ಯೋಜನಾಧಿಕಾರಿ ಶೋಭಾ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಗೋಪಾಲ್ ಸ್ವಾಗತಿಸಿ ಸಹಯೋಜನಾಧಿಕಾರಿ ಶೋಭಾ ವಂದಿಸಿದರು.ಸ್ವಯಂ ಸೇವಕಿ ಧನ್ಯ ನಿರೂಪಿಸಿದರು.

Related posts

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

Suddi Udaya

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya
error: Content is protected !!