September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ :ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಡಂತ್ಯಾರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ದ.ಕ.ಜಿಲ್ಲಾ ಸಹಕಾರಿ ಯೂನಿಯನ್, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇನ್ನಿತರ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ದ.ಕ.ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನಾ ಸಮಾರಂಭ ನ.14 ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ನ.10ರಂದು ಬಿಡುಗಡೆಗೊಳಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಸಿಎ ಬ್ಯಾಂಕ್ ಅಧ್ಯಕ್ಷ ಜೋಯಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿಸೋಜ, ನಿರ್ದೆಶಕರಾದ ಗಣೇಶ್ ಮೂಲ್ಯ ಅನಿಲಡೆ, ಮಹಾಬಲ ಕೆ, ಧನಲಕ್ಷ್ಮೀ ಚಂದ್ರಶೇಖರ್, ಅಮಿತ ಪ್ರಿಯಾ ಲೋಬೊ ಹಾಗೂ ಮಹೇಶ್ ಕೋಟ್ಯಾನ್ ಜೆಂಕ್ಯಾರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಚಿನ್ಮಯ್ ಜಿ.ಕೆ. 597, ನೇಹಾ ಭಟ್ 592 ಅಂಕದೊಂದಿಗೆ ಹೊಸ ದಾಖಲೆ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ

Suddi Udaya
error: Content is protected !!