25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದ ಉದ್ಘಾಟನೆ

ಉಜಿರೆ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಹ್ಯಾಂಡ್ ಬಾಲ್ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮ ಉಜಿರೆಯ ಎಸ್.ಡಿ.ಎಂ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆಯಿತು.

ಎಸ್.ಡಿ.ಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ ರಾಷ್ಟ್ರೀಯ ಆಟಗಾರ, ಪ್ರಸ್ತುತ ಬೆಳ್ತಂಗಡಿ ಎಕ್ಸಿಸ್ ಬ್ಯಾಂಕ್ ನ ಸೀನಿಯರ್ ಮ್ಯಾನೇಜರ್ ಆಗಿರುವ ಅರ್ವಿನ್ ಲೋಯ್ ಮೋರಸ್ ಪಂದ್ಯಾಟವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ, ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ. ಮಾತನಾಡಿ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಕ್ರೀಡೆಯನ್ನು ಪಠ್ಯದ ಅವಿಭಾಜ್ಯ ಅಂಗವಾಗಿ ಸ್ವೀಕರಿಸಿದೆ. ಸಂಸ್ಥೆಯ ಅಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ಕ್ರೀಡಾ ವಿಭಾಗಕ್ಕೆ ಸರ್ವ ರೀತಿಯ ಸಹಕಾರ ಮತ್ತು ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ. ಉದಾಹರಣೆಯಾಗಿ ಸುಸಜ್ಜಿತವಾದ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣವನ್ನು ಕಾಣಬವುದು. ಇದು ಕ್ರೀಡಾ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಸುತ್ತಲಿನ ಪರಿಸರದ ಸರ್ವ ಜನರಿಗೂ ಪ್ರಯೋಜನಕಾರಿಯಾಗಿದೆ.

ಸಂಸ್ಥೆಯ ಈ ಕ್ರೀಡಾಂಗಣ ಮತ್ತು ತರಬೇತಿಯಿಂದ ಹಲವಾರು ಜನ ಉನ್ನತ ಮಟ್ಟಕ್ಕೇರಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಇಂತಹ ಪ್ರಯತ್ನ ಮತ್ತು ಸಾಧನೆ ನಿಮ್ಮೆಲ್ಲರಿಗೂ ಸಾಧ್ಯವಿದೆ ಎಂದರು.

ಇದೇ ಸಂದರ್ಭದಲ್ಲಿ ಇಂಡಿಯನ್ ಪೋಸ್ಟಲ್ ಸೇವೆಗೆ ತನ್ನ ಕ್ರೀಡಾ ಸಾಧನೆಯ ಮೂಲಕ ಆಯ್ಕೆಯಾದ ಎಸ್.ಡಿ.ಎಂ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಮತ್ತು ಅಂತಾರಾಷ್ಟ್ರೀಯ ಕ್ರೀಡಾಪಟು ನಿತಿನ್ ಪೂಜಾರಿ ಇವರನ್ನು ಗೌರವಿಸಲಾಯಿತು.

ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ರಾಜೇಶ್ , ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್, ಅಲೋಶಿಯಸ್ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ನವೀನ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರು, ಸಿಬ್ಬಂದಿಗಳು, ಸಂಸ್ಥೆಯ ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು ಹಾಗೂ ಕ್ರೀಡಾ ಪಟುಗಳು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ್ ಜೈನ್ ನಿರೂಪಿಸಿ, ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಬಿ.ಪೂಂಜ ವಂದಿಸಿದರು.

Related posts

ಕೊಕ್ಕಡ: ಸೇಸಮ್ಮ ನಿಧನ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

Suddi Udaya

ಧರ್ಮಸ್ಥಳ ಗ್ರಾ. ಪಂ. ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!