25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ಸಿದ್ದಕಟ್ಟೆ ಯಕ್ಷ ಮಿತ್ರ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸದಾಶಿವ ಶೆಟ್ಟಿಗಾರ್ ಅವರು ಯಕ್ಷಗಾನ ಕ್ಷೇತ್ರದಲ್ಲಿ ಮರೆಯಲಾಗದ ಮಹಾನ್ ದೈತ್ಯ ಪ್ರತಿಭೆ. ಬಣ್ಣದ ಮಾಲಿಂಗರ ಗರಡಿಯಲ್ಲಿ ಪಳಗಿದ ಅವರ ಬಣ್ಣಗಾರಿಕೆ, ಸ್ಪಷ್ಟ ಮಾತುಗಳಿಂದ ತನ್ನದೇ ಛಾಪನ್ನು ಮೂಡಿಸಿದ್ದರು. ಮುಂದಿನ ಜನಾಂಗ ಅವರ ಪರಂಪರೆಯನ್ನು ಉಳಿಸಬೇಕಾಗಿದೆ ಎಂದು ಹಿರಿಯ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಅವರು ಹೇಳಿದರು.

ಸಿದ್ದಕಟ್ಟೆ ಯಕ್ಷಮಿತ್ರರು ಶ್ರೀ ಕ್ಷೇತ್ರ ಪೂಂಜ ಇದರ 8 ನೇ ವಾರ್ಷಿಕೋತ್ಸವ ಪ್ರಯುಕ್ತ ಸಿದ್ದಕಟ್ಟೆ ಫಲ್ಗುಣಿ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆದ ಬಣ್ಣದ ವೇಷದಾರಿ ದಿ.ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾ‌ರ್ ಅವರ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಹಾಗೂ ತಾಳಮದ್ದಳೆ ಕಾಠ್ಯಕ್ರಮದಲ್ಲಿ ಸಂಸ್ಮರಣೆ ನಡೆಸಿ ಮಾತನಾಡಿದರು.


ಶ್ರೀ ಕ್ಷೇತ್ರ ಪೂಂಜ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುದರ್ಶನ್ ಶೆಟ್ಟಿ ಹಕ್ಕೇರಿ ಕಾರ್ಯಕ್ರಮ ಉದ್ಘಾಟಿಸಿದರು. ಸಿದ್ದಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರಿಂಕಿಜಿ ಅಧ್ಯಕ್ಷತೆ ವಹಿಸಿದ್ದರು. ಹವ್ಯಾಸಿ ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ಸಿದ್ದಕಟ್ಟೆ ಯಕ್ಷ ಮಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶ್ರೀ ಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣ ಪ್ರಸಾದ್ ಆಸ್ರಣ್ಣ ರೋಟರಿ ಕ್ಲಬ್ ವಲಯ ಸೇನಾನಿ ರಾಮಚಂದ್ರ ಶೆಟ್ಟಿಗಾರ್, ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಮಂಜಿಲ, ಸಿದ್ದಕಟ್ಟೆ ವಲಯ ಬಂಟರ ಸಂಘದ ಅಧ್ಯಕ್ಷ ಸಂದೀಪ್ ಶೆಟ್ಟಿ ಪೊಡುಂಬ, ಸಮಿತಿ ಪದಾಧಿಕಾರಿ ಉಮೇಶ್ ಹಿಂಗಾಣಿ, ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ಸುರೇಶ್ ಶೆಟ್ಟಿ ಸಿದ್ದಕಟ್ಟೆ ಸಚ್ಚಿದಾನಂದ ಭಟ್, ಡಾ.ಯೋಗೀಶ್ ಕೈರೋಡಿ ಮತ್ತಿತರರು ಉಪಸ್ಥಿತರಿದ್ದರು. ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ ಅವರು ಸ್ವಾಗತಿಸಿದರು. ಗಣೇಶ್ ಶೆಟ್ಟಿ ವಂದಿಸಿದರು. ಉಮೇಶ್ ಪಾಳ್ಯ ನಿರೂಪಿಸಿದರು. ಬಳಿಕ ಇಂದ್ರಜಿತು ಕಾಳಗ ಯಕ್ಷಗಾನ ತಾಳಮದ್ದಳೆ ನಡೆಯಿತು.

Related posts

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿ.ಪ. ಶಾಸಕ ಟಿ ಎ ಶರವಣ ಭೇಟಿ

Suddi Udaya

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

Suddi Udaya
error: Content is protected !!