26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕರಾದ ಹರೀಶ್ ಪೂಂಜಾರವರು ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ.

ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಬೆಂಬಲ ನೀಡುವ ಸಲುವಾಗಿ ಕಳೆದ ಏಳು ವರ್ಷಗಳಿಂದ ಕ್ರೀಡಾ ಸಮವಸ್ತ್ರಗಳನ್ನು ಒದಗಿಸುತ್ತಿದ್ದಾರೆ. ಅದೇ ರೀತಿ ಈ ವರ್ಷವೂ ಕೂಡಾ ಸುಮಾರು ರೂ. 70,000 ಮೌಲ್ಯದ ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ. ಹರೀಶ್ ಪೂಂಜಾರವರ ಮನೆಯಲ್ಲಿ ಸಾಂಕೇತಿಕವಾಗಿ ತಾಲೂಕಿನ ಕ್ರೀಡಾ ಪ್ರತಿಭೆಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯಾ ಬಿ., ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣನಂದ ರಾವ್, ದ.ಕ. ಜಿಲ್ಲೆಯ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರವಿರಾಜ್ ಗೌಡ, ಬೆಳ್ತಂಗಡಿ ತಾಲೂಕು ಗ್ರೇಡ್ – 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ, ಬೆಳ್ತಂಗಡಿ ತಾಲೂಕು ಗ್ರೇಡ್ – 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅಖಿಲ್ ಕುಮಾರ್, ಗ್ರೇಡ್ – 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಪದಾಧಿಕಾರಿ ಅಜಿತ್ ಕುಮಾರ್ ಹಾಗೂ ಹಲವರು ಉಪಸ್ಥಿತರಿದ್ದರು.

Related posts

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya
error: Content is protected !!