25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

ಬೆಳ್ತಂಗಡಿ: ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತ ರಕ್ಷಣಾ ವೇದಿಕೆಯಿಂದ ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರ ವಿಷಯವಾಗಿದ್ದು ಈ ಬಗ್ಗೆ ಸರಕಾರದ ಗಮನ ಸೆಳೆಯಲು ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ಹಿಂದಿನ ಸರಕಾರಗಳು ರಬ್ಬರು ಕೃಷಿಗೆ ನೀಡಿದ ಪ್ರೋತ್ಸಾಹದಿಂದ ನಮ್ಮ ರಾಜ್ಯದಲ್ಲಿಯೂ ಕೃಷಿಕ ಬೆಳೆಗಾರರು ದಕ್ಷಿಣಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು ಉತ್ತರಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ವಾಣಿಜ್ಯ ಬೆಳೆಯಾಗಿ ರಬ್ಬರು ಕೃಷಿಯಲ್ಲಿ ತೊಡಗಿಕೊಂಡಿರುತ್ತಾರೆ. ಇದೀಗ ರಬ್ಬರು ಆದಾಯ ಕೃಷಿ ಖರ್ಚು-ವೆಚ್ಚ ಸರಿದೂಗಿಸದೇ ಇದ್ದು ಅವಲಂಬಿತ ಕೃಷಿಕರು ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ವಿವರಿಸಲಾಯಿತು. ಅಂತೆಯೇ ರಬ್ಬರು ಆಮದು ಸುಂಕವನ್ನು ಹೆಚ್ಚಿಸಿ ದೇಶೀಯ ರಬ್ಬರು ಉತ್ಪಾದನೆಗೆ ಹೆಚ್ಚಿನ ಬೇಡಿಕೆ ಬರುವಂತೆ ಮತ್ತು ರಬ್ಬರಿಗೆ ಕನಿಷ್ಟ ಬೆಂಬಲ ಬೆಲೆಯನ್ನು ನಿಗದಿಪಡಿಸುವಂತೆ ಸರಕಾರವನ್ನು ಬೆಳೆಗಾರರ ಪರವಾಗಿ ಒತ್ತಾಯಿಸಲು ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯ ಸಲಹೆಗಾರರಾದ ಹಿರಿಯ ಅರ್ಥಿಕ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ, ಅಧ್ಯಕ್ಷ ಶ್ರೀಧರ ಜಿ ಭಿಡೆ, ಸಂಯೋಜಕ ಅನಂತ ಭಟ್ ಎಂ, ಕಾರ್ಯದರ್ಶಿ ರಾಜು ಶೆಟ್ಟಿ, ಬೆಳ್ತಂಗಡಿ ರಬ್ಬರ್ ಸೊಸೈಟಿ ನಿರ್ದೇಶಕ ಶಾಜಿ ಪಿ ಎ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

Suddi Udaya
error: Content is protected !!