28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ  ನ.10 ರಂದು “ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮಗಳು” ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಎಸ್ ಡಿ ಎಂ ಶಿಕ್ಷಣಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು  ಆಯೋಜಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ ವಹಿಸಿದರು.

ಮುಖ್ಯ ಅತಿಥಿಗಳಾಗಿ ನೀಲಯ್ಯ ಗೌಡ, ಉಸ್ಮಾನ್ ಭಾಗವಹಿಸಿದ್ದರು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಲ್ಲಿ ಅಗ್ನಿ ಅವಘಡದ ಸಮಯದಲ್ಲಿ ಶಾಂತವಾಗಿ ಮತ್ತು ಸುರಕ್ಷಿತವಾಗಿ ವರ್ತಿಸುವ ನೈಪುಣ್ಯವನ್ನು ಬೆಳೆಸುವುದಾಗಿತ್ತು.

ಕಾರ್ಯಕ್ರಮವನ್ನು ಸ್ಥಳೀಯ ಅಗ್ನಿಶಾಮಕ ದಳದ ಅಧಿಕಾರಿಗಳ ಸಹಯೋಗದಲ್ಲಿ ನಡೆಸಲಾಯಿತು. ಪ್ರಾರಂಭದಲ್ಲಿ ಅಗ್ನಿಶಾಮಕ ಅಧಿಕಾರಿ ಉಸ್ಮಾನ್ ಅಗ್ನಿ ಸಂಭವಿಸುವ ಕಾರಣಗಳು, ಅಗ್ನಿಯ ವಿಧಗಳು ಹಾಗೂ ಅದರ ನಿಯಂತ್ರಣ ವಿಧಾನಗಳ ಬಗ್ಗೆ ವಿವರಿಸಿದರು. ಅವರು ಗ್ಯಾಸ್ ಲೀಕ್ ಆಗುವಾಗ ತೆಗೆದುಕೊಳ್ಳಬೇಕಾದ ಕ್ರಮಗಳು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾಗುವ ಬೆಂಕಿಯನ್ನು ಹೇಗೆ ನಂದಿಸಬೇಕು ಎಂಬುದರ ಕುರಿತು ಸ್ಪಷ್ಟವಾದ ಮಾಹಿತಿ ನೀಡಿದರು.

ನಂತರ ಪ್ರಾಯೋಗಿಕ ಪ್ರದರ್ಶನ (ಪ್ರಾತ್ಯಕ್ಷಿಕೆ) ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಅಗ್ನಿಶಾಮಕ ಉಪಕರಣಗಳನ್ನು ಹೇಗೆ ಬಳಸಿ ಬೆಂಕಿ ನಂದಿಸಬಹುದು ಎಂಬುದನ್ನು ತೋರಿಸಲಾಯಿತು. ಕೆಲವು ವಿದ್ಯಾರ್ಥಿಗಳಿಗೆ ಸಹ ಭಾಗವಹಿಸುವ ಅವಕಾಶ ನೀಡಲಾಗಿತ್ತು. ಪ್ರಶಿಕ್ಷಣಾರ್ಥಿ ವಾಹಿನಿ ಸ್ವಾಗತಿಸಿ, ಪ್ರಶಿಕ್ಷಣಾರ್ಥಿ ನೀದು ಕಾರ್ಯಕ್ರಮ ನಿರೂಪಿಸಿ, ಅಖಿಲ ಧನ್ಯವಾದಗಳನ್ನು ಅರ್ಪಿಸಿದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ಪಟ್ರಮೆ: ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ತಡೆಗೋಡೆ ಕುಸಿತ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya
error: Content is protected !!