26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

ಬೆಳ್ತಂಗಡಿ:  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಕುರಿತು ಹಾಗೂ ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣನವರ್‌ ವಿರುದ್ಧ ಸಲ್ಲಿಸಲಾಗಿರುವ ದೂರಿನ ಸಂಬಂಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.

ಬೆಂಗಳೂರಿನ ರಾಜಾಜಿನಗರ ನಿವಾಸಿ ಸಾಮಾಜಿಕ ಕಾರ್ಯಕರ್ತೆ ಕಾವೇರಿ ಕೇದಾರನಾಥ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ಹಿರಿಯ ವಕೀಲ ಎಸ್ ರಾಜಶೇಖರ್ ವಾದಿಸಿದರು.

ಗಿರೀಶ್ ಮಟ್ಟಣ್ಣನವರ್ ಹೇಳಿಕೆ ವಿರುದ್ಧ 2025ರ ಆಗಸ್ಟ್ 29ರಂದು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದ ಕಾವೇರಿ ಕೇದಾರನಾಥ ನೇತೃತ್ವದ ನಿಯೋಗ ಮಟ್ಟಣ್ಣನವರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು. ದೂರಿನ ಸಂಬಂಧ ಮಹಿಳಾ ಆಯೋಗದಿಂದ ಈವರೆಗೆ ಯಾವುದೇ ಕ್ರಮ ಆಗದ ಕಾರಣ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ ಅರ್ಜಿದಾರರು ಸಲ್ಲಿಸಿರುವ ದೂರು ಆಧರಿಸಿ ಗಿರೀಶ್ ಮಟ್ಟಣ್ಣನವರ್ ವಿರುದ್ದ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ನ್ಯಾಯಾಲಯ ಮಹಿಳಾ ಆಯೋಗಕ್ಕೆ ನಿರ್ದೇಶನ ನೀಡಿದೆ

Related posts

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

Suddi Udaya

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

Suddi Udaya
error: Content is protected !!