28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಬೆಳ್ತಂಗಡಿ: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತ ರಕ್ಷಣಾ ವೇದಿಕೆಯಿಂದ ಮಂಗಳವಾರ ಬೆಂಗಳೂರಿನಲ್ಲಿ ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರ ವಿಷಯವಾಗಿದ್ದು ಈ ಬಗ್ಗೆ ಸರಕಾರದ ಗಮನ ಸೆಳೆಯಲು ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ಹಿಂದಿನ ಸರಕಾರಗಳು ರಬ್ಬರು ಕೃಷಿಗೆ ನೀಡಿದ ಪ್ರೋತ್ಸಾಹದಿಂದ ನಮ್ಮ ರಾಜ್ಯದಲ್ಲಿಯೂ ಕೃಷಿಕ ಬೆಳೆಗಾರರು ದಕ್ಷಿಣಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು ಉತ್ತರಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ವಾಣಿಜ್ಯ ಬೆಳೆಯಾಗಿ ರಬ್ಬರು ಕೃಷಿಯಲ್ಲಿ ತೊಡಗಿಕೊಂಡಿರುತ್ತಾರೆ. ಇದೀಗ ರಬ್ಬರು ಆದಾಯ ಕೃಷಿ ಖರ್ಚು-ವೆಚ್ಚ ಸರಿದೂಗಿಸದೇ ಇದ್ದು ಅವಲಂಬಿತ ಕೃಷಿಕರು ಸಮಸ್ಯೆ ಅನುಭವಿಸುತ್ತಿರುವ ಬಗ್ಗೆ ವಿವರಿಸಲಾಯಿತು. ರಬ್ಬರಿಗೆ ಕನಿಷ್ಟ ಬೆಂಬಲ ಬೆಲೆಯನ್ನು ನಿಗದಿ ಪಡಿಸುವಂತೆ ಸರಕಾರವನ್ನು ಬೆಳೆಗಾರರ ಪರವಾಗಿ ಒತ್ತಾಯಿಸಲು ವಿನಂತಿಸಲಾಯಿತು.

ಈ ತಿಂಗಳ ಕೊನೆ ವಾರದಲ್ಲಿ ಉಜಿರೆಯಲ್ಲಿ ನಡೆಯುವ ರಬ್ಬರ್ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸುವಂತೆ ಕೋರಿಕೆ ಸಲ್ಲಿಸಲಾಯಿತು. ವೇದಿಕೆಯ ಅಧ್ಯಕ್ಷ ಶ್ರೀಧರ ಜಿ.ಭಿಡೆ ಹಾಗೂ ಉಪಾಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಉಪಸ್ಥಿತರಿದ್ದರು.
ಮನವಿಗೆ ಸ್ಪಂದಿಸಿದ ಸಚಿವರು ರಬ್ಬರ್ ಬೆಳೆಗಾರರ ಸಮಸ್ಯೆ ಪರಿಹಾರದ ಕುರಿತು ತಕ್ಷಣ ಸರಕಾರದ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು.

Related posts

ಉಜಿರೆ: ನಿಡಿಗಲ್ ನಿವಾಸಿ ಜಾನಕಿ ಭಂಡಾರಿ ನಿಧನ

Suddi Udaya

ಕೃಷಿ ಮಾಡಿ ಜೀವನ ನಡೆಸಲು 2 ಎಕರೆ ಡಿಸಿ ಮನ್ನಾ ಭೂಮಿ ನೀಡಿ , ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕುಂದು ಕೊರತೆ ಸಭೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ನಾಯಕರುಗಳ ಆಗ್ರಹ

Suddi Udaya

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ರಾಷ್ಟ್ರಮಟ್ಟದ ಸಿ ಎ ಪರೀಕ್ಷೆ: ಪ್ರಥಮ ಯತ್ನದಲ್ಲೇ ಮಿಂಚಿದ ಎಕ್ಸೆಲ್ ನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು

Suddi Udaya

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya
error: Content is protected !!