26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

ಬೆಳ್ತಂಗಡಿ: ರಾಜ್ಯ ಮಟ್ಟದ 16 ವರ್ಷ ವಯೋಮಾನದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಆಯ್ಕೆ ಕ್ಯಾಂಪ್ ಗೆ ಆಯ್ಕೆಯಾಗಿದ್ದಾರೆ.

ಈಗಾಗಲೇ ತಾಲೂಕು , ಜಿಲ್ಲೆ ಸೇರಿದಂತೆ ಮೈಸೂರು ವಿಭಾಗ , ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿದ ಇವರು ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಆಯ್ಕೆಗಾಗಿ ನಡೆಸುವ ಕ್ಯಾಂಪ್ ಗೆ ಆಯ್ಕೆಯಾಗಿದ್ದಾರೆ.

ಇವರು ಶ್ರೀರಾಮ ಪ್ರೌಢಶಾಲೆ ಸುಲ್ಕೇರಿ ಇಲ್ಲಿ 10 ನೇ ತರಗತಿ ವಿದ್ಯಾರ್ಥಿ, ಸುಲ್ಕೇರಿ ಗ್ರಾಮದ ಭಂಡಾರಗೋಳಿ ನಿವಾಸಿ ಶ್ರೀಧರ್ ಮತ್ತು ಪುಷ್ಪ ದಂಪತಿಯ ಪುತ್ರ.

Related posts

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ಬೆಳ್ತಂಗಡಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ

Suddi Udaya

ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿಗಳ ರಕ್ಷಣೆ

Suddi Udaya
error: Content is protected !!