25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಜಿಲ್ಲಾ ಪಂಚಾಯತ್ ದಾವಣಗೆರೆ, ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ದಾವಣಗೆರೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ, ಹಾಗೂ ಕರ್ನಾಟಕ ರಾಜ್ಯ ದೈ. ಶಿ. ಶಿ. ಸಂಘ, ದಾವಣಗೆರೆ ಹಾಗೂ ಅಲ್ – ಫತಹ್ ಕನ್ನಡ ಮತ್ತು ಉರ್ದು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸುಲ್ತಾನ್ ಪ್ಯಾಲೇಸ್ ದಾವಣಗೆರೆ ಇವರ ನೇತೃತ್ವದಲ್ಲಿ ನಡೆದ, 2025-26ನೇ ಸಾಲಿನ, 14 ವರ್ಷದ ಬಾಲಕ -ಬಾಲಕಿಯರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನವಚೇತನ ಆಂಗ್ಲ ಮಾಧ್ಯಮ ಶಾಲೆ ವೇಣೂರು ಇಲ್ಲಿನ ಎಂಟನೇ ತರಗತಿಯ ವಿದ್ಯಾರ್ಥಿಯಾದ ಶರ್ವಿನ್ ಮೊನಿಸ್ ಇವರು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಪ್ರಥಮ ಸ್ಥಾನವನ್ನು ಪಡೆದು, ಡಿಸೆಂಬರ್ ತಿಂಗಳಲ್ಲಿ ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಇವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಸನ್ಮಾನಿಸಿ, ಅಭಿನಂದಿಸಿದರು.

ಮಡಂತ್ಯಾರುನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಗುಂಡು ಎಸೆತ ಮತ್ತು ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಕೋಟಿ ಚೆನ್ನಯ ಕ್ರೀಡಾಂಗಣ ಪಂಜ ಸುಳ್ಯ ದಲ್ಲಿ ನಡೆಯುವ ಜಿಲ್ಲಾ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಭಗಿನಿ ವೀರಾ ಡಿಸೋಜಾ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ದಿವ್ಯ ಮಹೇಶ್, ಪದಾಧಿಕಾರಿಗಳಾದ ಅನಿಲ್ ಪಿಂಟೋ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ದೀಕ್ಷಿತ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ರವರ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

Suddi Udaya

ಪಡುಮಲೆ ದೇಯಿ ಬೈದೆತಿ ಮೂಲಸ್ಥಾನದಲ್ಲಿ ಪ್ರಶ್ನಾ ಚಿಂತನೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya
error: Content is protected !!